ಬಂಟ್ವಾಳ: ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ ಒಟ್ಟು 88 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
2020ರ ಅ. 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕ ದಿನೇಶ್ ರವರ ಸ್ಟುಡಿಯೋಗೆ ನುಗ್ಗಿ , ಪೂರ್ವದ್ವೇಷದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳು ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2020ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 307, 324, 326, 504, 506 ಹಾಗೂ 34ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್.
ಅವರು ಆರೋಪಿಗಳಾದ ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ (ಮುನ್ನಿ) ಹಾಗೂ ಮಹಮ್ಮದ್ ಸವಾದ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು 2026ರ ಅ. 28ರಂದು ನಾಲ್ವರು ಆರೋಪಿಗಳಿಗೂ ಏಳು ವರ್ಷಗಳ ಜೈಲು ಶಿಕ್ಷೆ ಹಾಗೂ 88 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಶ್ರೀಮತಿ ಜ್ಯೋತಿ ನಾಯಕ್ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.








