Coastal Bulletin

ದೇವಂದಬೆಟ್ಟು ದೇವಸ್ಥಾನ ಸಂಪರ್ಕಿಸುವ 4 ರಸ್ತೆಗಳನ್ನು ಅಭಿವೃದ್ಧಿ, ಕುಡಿಯುವ ನೀರಿಗೆ ಪ್ರತ್ಯೇಕ ಕೊಳವೆ ಬಾವಿ ವ್ಯವಸ್ಥೆ ಮಾಡಲಾಗುವುದು ಮತ್ತು ತಡೆಗೋಡೆ ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದರು. ಅವರು ಭಾನುವಾರ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿನೀಡಿ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದರು.

ಕಳ್ಳಿಗೆ ಸೇರಿದಂತೆ ಹಲವು ಗ್ರಾಮಗಳಿಗೆ ಮನೆಮನೆಗೆ ಸಂಪರ್ಕಿಸುವ ಕುಡಿಯುವ ಯೋಜನೆಗೆ 180 ಕೋ.ರೂ. ವೆಚ್ಚದಲ್ಲಿ ಯೋಜನೆಯನ್ನು ರೂಪಿಸಲಾಗಿದ್ದು, ಶನಿವಾರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದಾಗಿ ತಿಳಿಸಿದರು.

ತಾಲೂಕಿನಾದ್ಯಂತ ಹಲವು ಕಿಂಡಿಅಣೆಕಟ್ಟುಗಳನ್ನು ನಿರ್ಮಿಸಲಾಗಿದ್ದು, ಮುಂದಿನ ಒಂದೂವರೆ ವರ್ಷದಲ್ಲಿ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಯೋಜನೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.


Leave a Comment