ತುಂಬೆ : ತಾ ಪಂ ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ನಿಧನ.

Coastal Bulletin
ತುಂಬೆ : ತಾ ಪಂ ಮಾಜಿ ಸದಸ್ಯ ಸೋಮಪ್ಪ ಕೋಟ್ಯಾನ್ ನಿಧನ.

ಬಂಟ್ವಾಳ: ತಾಲೂಕು ಪಂಚಾಯತ್ ನ ಮಾಜಿ ಸದಸ್ಯ ತುಂಬೆ ನಿವಾಸಿ ಸದಸ್ಯ ಸೋಮಪ್ಪ ಕೋಟ್ಯಾನ್ ಅಲ್ಪಕಾಲದ ಅನಾರೋಗ್ಯದಿಂದ ನ. 27ರಂದು ನಿಧನರಾಗಿದ್ದಾರೆ.

ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಮಂಗಳೂರು ಮಂಡಲ ಪ್ರಮುಖರಾಗಿ ತುಂಬೆ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಕಳೆದ 25 ವರ್ಷಗಳಿಂದ ತುಂಬೆ ಶ್ರೀ ಶಾರದಾ ಸೇವಾ

ಪ್ರತಿಷ್ಠಾನದ ಕೋಶಾಧಿಕಾರಿಯಾಗಿ, ಬಿಲ್ಲವ ಸಮಾಜದ ಗುರಿಕಾರರಾಗಿ, ಯುವ ಸಮುದಾಯದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಮೃತರು ಪತ್ನಿ ಹಾಗೂ ಎರಡು ಗಂಡು, ಒಂದು ಹೆಣ್ಣು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Leave a Comment