ಮಂಗಳೂರು : ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ದ.ಕ.ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು, ಬಂಟ್ವಾಳ ತಾಲೂಕು ಕೃಷಿ ಉತ್ಪನ್ನ ಸಹಕಾರಿ ಮಾರಾಟ ಸಂಘ ಇವರ ಸಹಯೋಗದಲ್ಲಿ ಜ.ಕೆ.ಎಸ್.ಹೆಗ್ಡೆ ಚ್ಯಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಎ.ಬಿ.ಶೆಟ್ಟಿ ಇನ್ ಸ್ಟಿಟ್ಯೂಟ್ ಆಫ್ ಡೆಂಟಲ್ ಸಯನ್ಸ್ ದೇರಳಕಟ್ಟೆ ಇವರಿಂದ ಜ.3 ರಂದು ಕಣ್ಣು - ದಂತ - ವೈದ್ಯಕೀಯ ಶಿಬಿರ ನಡೆಯಲಿದೆ.
ಈ ಶಿಬಿರದಲ್ಲಿ ಕ್ಷಯ ರೋಗಿಗಳಿಗೆ ಆಹಾರ ಧವಸಧಾನ್ಯ ವಿತರಣೆ ಕೂಡ ನಡೆಯಲಿದೆ. ಅಲ್ಲದೇ ಈ ಶಿಬಿರದಲ್ಲಿ ರೋಗ ಪತ್ತೆ ಹಚ್ಚಿದಲ್ಲಿ ಆಸ್ಪತ್ರೆಯ ಸೌಲಭ್ಯಗಳನ್ನು ಆಸ್ಪತ್ರೆಯ ಕಾರ್ಡಿನ ಮುಖಾಂತರ ವಿಶೇಷ ರಿಯಾಯಿತಿ ದರದಲ್ಲಿ ಒದಗಿಸುವ
ವ್ಯವಸ್ಥೆ ಇದೆ. ಕಣ್ಣಿನ ಶಸ್ತ್ರ ಚಿಕಿತ್ಸೆ, ಹೆರಿಗೆ, ಸಿಜೇರಿಯನ್ ಹೆರಿಗೆ ಮತ್ತು ಸೀಳು ತುಟಿ ವಿಕಲಾಂಗತೆಗಳನ್ನು ಉಚಿತವಾಗಿ ಶಸ್ತ್ರ ಚಿಕಿತ್ಸೆ ಮಾಡಿಕೊಡಲಾಗುವುದು ಎಂದು ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ














