ಬಂಟ್ವಾಳ :ಶ್ರೀ ಅನ್ನಪೂರ್ಣೇಶ್ವರಿ ಮಿತ್ರ ಮಂಡಳಿ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಮಂಡಳಿ ಕಬೇಲ ಇದರ 45ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಫೆ.1ರಂದು ಆದಿತ್ಯವಾರ ಕಬೇಲ ಬಾಕಿಮಾರು ಗದ್ದೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಅಂದು ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಅಶ್ವತ್ಥಕಟ್ಟೆ ಪೂಜೆ, 11ಕ್ಕೆ ಮಹಾಪೂಜೆ ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಅನ್ನಸಂತರ್ಪಣೆ ಜರುಗಲಿದೆ.
ಅಪರಾಹ್ನ 3.30ರಿಂದ ಭಜನಾ ಸಂಕೀರ್ತನೆ, ಬಳಿಕ
ಮಾತೃಪೂಜೆ, 6.30ರಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ "ಬೊಳ್ಳಿ ಮಲೆತ ಬೊಲ್ಲು"ಯಕ್ಷಗಾನ ಬಯಲಾಟ ನಡೆಯಲಿದ್ದು, ಚೌಕಿ ಪೂಜೆಯ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.














