ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಕಾರ್ಯಕ್ಷೇತ್ರ ವ್ಯಾಪ್ತಿಯ ಬಿ.ಸಿ.ರೋಡ್, ಕೈಕಂಬ ಹಾಗೂ ಮಂಡಾಡಿ ಒಕ್ಕೂಟಗಳ ಪದಗ್ರಹಣ ಹಾಗೂ ತುಂಬೆ ವಲಯದ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಸಮಾರಂಭ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌಧ ದಲ್ಲಿ ನಡೆಯಿತು.
ಬಂಟ್ವಾಳ ಪುರಸಭಾಧ್ಯಕ್ಷರಾದ ಮಹಮ್ಮದ್ ಶರೀಫ್ ಇವರ ಅಧ್ಯಕ್ಷತೆ ವಹಿಸಿದ್ದರು. . ಶ್ರೀ ಕ್ಷೇತ್ರ ಕಾರಂಬಡೆ ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಸ್ವ ಸಹಾಯ ಸಂಘಗಳ ಮುಖಾಂತರ ಗ್ರಾಮೀಣ ಭಾಗದ ಪುರುಷರು ಹಾಗೂ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು. ಗ್ರಾಮಾಭಿವೃದ್ಧಿ ಯೋಜನೆಯ ಸಿಗುವ ವಿವಿಧ ಸವಲತ್ತು ಪಡೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಮನೆಯೇ ಮೊದಲ ಪಾಠಶಾಲೆ ಆಗಿರೋದರಿಂದ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸುವ ಜವಾಬ್ದಾರಿ ತಾಯಂದಿರಲ್ಲಿ ಇದೆ ಎಂದರು.
ಮುಖ್ಯ ಅತಿಥಿಗಳಾಗಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ಎಂ ಎಸ್ ಯೋಜನಾಧಿಕಾರಿ ಮಹಾಂತೇಶ್ ಬಿ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಪದಾಧಿಕಾರಿಗಳ ಕರ್ತವ್ಯ ಬಗ್ಗೆ ಮಾಹಿತಿ ನೀಡಿದರು.
ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯನಂದ ಪಿ ಮಾತನಾಡಿ ಬಂಟ್ವಾಳ ತಾಲೂಕಿನಲ್ಲಿ ಯೋಜನೆಯ ವ್ಯಾಪ್ತಿಯಲ್ಲಿ 7 ವಲಯಗಳಿದ್ದು 7 ಮೇಲ್ವಿಚಾರಕರು 67 ಮಂದಿ ಸೇವಾ ಪ್ರತಿನಿಧಿಗಳ ಮೂಲಕ ಉತ್ತಮ ಸಂಘಟನೆಯನ್ನು ರಚಿಸಿ ಯೋಜನೆಯ ಎಲ್ಲಾ ವಿಶೇಷ ಕಾರ್ಯಕ್ರಮಗಳನ್ನು ಗ್ರಾಮಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಹಕಾರಿಯಾಗಿದೆ ಎಂದರು.
ಬಂಟ್ವಾಳ ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯ ಸಂರಕ್ಷಣಾಧಿಕಾರಿ ಭಾರತಿ ಇಲಾಖೆಯಿಂದ ಮಹಿಳೆ ಹಾಗೂ ಮಕ್ಕಳಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್
ಭಾರತಿ ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು.
ತುಂಬೆ ವಲಯದ 9 ಒಕ್ಕೂಟಗಳ ನಿಕಟಪೂರ್ವ ಅಧ್ಯಕ್ಷ ಮಾಧವ ವಳವೂರು , ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ರೊನಾಲ್ಡ್ ಡಿಸೋಜ, ಬಂಟ್ವಾಳ ಪೊಲೀಸ್ ಠಾಣೆಯ ಎಎಸ್ಐ ಬಶೀರ್, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಿ.ಸಿ ರೋಡ್ ವಲಯದ ನಿಕಟಪೂರ್ವ ಅಧ್ಯಕ್ಷರಾದ ಶೇಖರ್ ಸಾಮಾನಿ, ಬಿ.ಸಿ ರೋಡ್ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ರಾಮಚಂದ್ರ, ಪದಾಧಿಕಾರಿಗಳಾದ ಲೋಲಾಕ್ಷಿ, ಶೈನಾಜಾ, ಸರಿತಾ, ವಾರಿಜ, ಬಿ.ಸಿ ರೋಡ್ ಒಕ್ಕೂಟದ ನೂತನ ಅಧ್ಯಕ್ಷೆ ಹೇಮಾವತಿ, ಪದಾಧಿಕಾರಿಗಳಾದ ಯಶೋಧ, ಸವಿತಾ ,ಮಿಶ್ರಿಯ ,ಸಂಧ್ಯಾ, ಮಂಡಾಡಿ ಒಕ್ಕೂಟದ ನೂತನ ಅಧ್ಯಕ್ಷೆ ಜಯಲಕ್ಷ್ಮಿ, ಪದಾಧಿಕಾರಿಗಳಾದ ವನಜ, ಗೀತಾ, ಆಝೃಯ ಬಾನು. ದಯಾನಂದ ,ಕೈಕಂಬ ಒಕ್ಕೂಟದ ನೂತನ ಅಧ್ಯಕ್ಷ ಶಶಿಕಲಾ ,ಪದಾಧಿಕಾರಿ ಗಳಾದ ಬಾಬು ಗಟ್ಟಿ, ಪ್ರತಿಭಾ, ಚಿತ್ರ,ಝೀನತ್, ಉ,ಪಸ್ಥಿತರಿದ್ದರು.
ಇದೇ ವೇಳೆ ತಾಲೂಕು ಯೋಜನಾಧಿಕಾರಿ ಜಯನಂದ ಪಿ, ಮೇಲ್ವಿಚಾರಕ ಕೇಶವ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು. ಯೋಜನೆಯ ಸದಸ್ಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಸಂಧ್ಯಾ ಸ್ವಾಗತಿಸಿ, ಮಂಡಾಡಿ ಒಕ್ಕೂಟದ ಸೇವಾ ಪ್ರತಿನಿಧಿ ಆಶಾಲತಾ ವರದಿ ವಾಚಿಸಿ, ಬಿ.ಸಿರೋಡು ಒಕ್ಕೂಟದ ಸೇವಾ ಪ್ರತಿನಿಧಿ ವನಜಾಕ್ಷಿ ಬಹುಮಾನ ಪಟ್ಟಿ ವಾಚಿಸಿದರು. ಸವಿತಾ ವಂದಿಸಿ , ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಸತ್ಯಪ್ರಸಾದ್ ಕುಲಾಲ್ ಸಹಕರಿಸಿದರು.














