ಬಂಟ್ವಾಳ: ಪುತ್ತೂರಿಗೆ ತೆರಳುವ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬಿಸಿರೋಡ್ ನ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು ಈ ಸಂದರ್ಭದಲ್ಲಿ ಮಾತನಾಡಿದ ಆವರು .ಶಾಸಕ ರಾಜೇಶ್ ನಾಯ್ಕ್ ಅವರ ಮೂಲಕ ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆಯ ಜತೆ ನಡೆದಿರುವ ಅಭಿವೃದ್ಧಿಯನ್ನು ಮತವಾಗಿ ಪರಿವರ್ತಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ರಾಷ್ಟ್ರ ನಾಯಕರಾದ ಮೋದಿ, ಅಮಿತ್ ಷಾ, ನಡ್ಡಾ ಹೀಗೆ ಎಲ್ಲಾ ನಾಯಕರು ತಮ್ಮ ಸಮಯವನ್ನು ಕರ್ನಾಟಕಕ್ಕೆ ಮೀಸಲಿಟ್ಟಿದ್ದು, ಕಾರ್ಯಕರ್ತರು ಪೂರ್ಣ ಪ್ರಮಾಣದ ಶ್ರಮದೊಂದಿಗೆ ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು.
ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾತನಾಡಿ, ಯುವಕರ ಕಣ್ಮಣಿ, ದಕ್ಷ ಅಧಿಕಾರಿ ಅಣ್ಣಾಮಲೈ ಅವರು ಬಂಟ್ವಾಳದ ಕುರಿತು ವಿಶೇಷ ಅಭಿಮಾನ ಹೊಂದಿದ್ದು, ಇಲ್ಲಿನ ವಿಷಮ ಪರಿಸ್ಥಿತಿಯಲ್ಲಿ ಅವರು ಚಾರ್ಜ್ ನಲ್ಲಿ ಕೆಲಸ ನಿರ್ವಹಿಸಿರುವುದನ್ನು ಈಗಲೂ ನೆನಪಿಸಿಕೊಳ್ಳುತ್ತಾರೆ ಎಂದರು.
ಮಾಜಿ ಶಾಸಕ ಪದ್ಮನಾಭ
ಕೊಟ್ಟಾರಿ, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಆರ್.ಸಿ.ನಾರಾಯಣ್, ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್ ಉಪಸ್ಥಿತರಿದ್ದರು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.















