ಚುನಾವಣೆ ಹಿನ್ನೆಲೆ 3 ದಿನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

Coastal Bulletin
ಚುನಾವಣೆ ಹಿನ್ನೆಲೆ 3 ದಿನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ

ಬಂಟ್ವಾಳ: ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ. 1ರಂದು ಸಂಜೆ 4ರಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.

ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ

ಹಿತದೃಷ್ಟಿಯಿಂದ ಮ್ಯದದ ಅಂಗಡಿ, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೊಟೇಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.

Leave a Comment