Coastal Bulletin

ಬಂಟ್ವಾಳ: ವಿಟ್ಲ ಸಮೀಪದ ಬದನಾಜೆ ಎಂಬಲ್ಲಿನ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಮಾನವನ ರಕ್ತ ಮತ್ತು ತಲೆಯ ಒಳಭಾಗದ ತುಣುಕು ಇಂದು ಪತ್ತೆಯಾಗಿದೆ.

ಬದನಾಜೆ ಬಸ್ ನಿಲ್ದಾಣದಲ್ಲಿ ರಕ್ತ ಮತ್ತು ತಲೆಯ ಒಳಭಾಗದ ತುಣುಕು ಪತ್ತೆಯಾಗಿದ್ದು ಈ ಘಟನೆ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡಿಸಿದೆ.

ಬಸ್ ನಿಲ್ದಾಣದಲ್ಲಿ ಯಾರನ್ನಾದರೂ ಹತ್ಯೆ ಮಾಡಲಾಗಿತ್ತೇ? ಅಥವಾ ಅಪಘಾತದಿಂದ ಗಾಯಗೊಂಡವರು

ಯಾರಾದರೂ ಬಸ್ ನಿಲ್ದಾಣದಲ್ಲಿ ಕುಳಿತು ಬಳಿಕ ಆಸ್ಪತ್ರೆಗೆ ತೆರಳಿರಬಹುದೇ ಎಂಬ ಅನುಮಾನಗಳು ಸಾರ್ವಜನಿಕರಲ್ಲಿ ಸೃಷ್ಟಿಯಾಗಿದೆ.

ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಪ್ರಕರಣದ ಸತ್ಯಾಂಶ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

Leave a Comment