Coastal Bulletin

ಇಂದಿನಿಂದ (ಜು.29) ಆಗಸ್ಟ್ 1ರವರೆಗೆ ದ.ಕ. ಜಿಲ್ಲೆಯಲ್ಲಿ ಅಗತ್ಯ ಸೇವೆಯನ್ನು ಹೊರತುಪಡಿಸಿ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯ ಸೇವೆಗಳು, ಆಸ್ಪತ್ರೆ ಹಾಗು ಮೆಡಿಕಲ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ಅಂಗಡಿಗಳು ಆಗಸ್ಟ್ 1ರವರೆಗೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಮಾತ್ರ ತೆರೆಯಲು ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು.

ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ‌ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Leave a Comment