ಮಂಗಳೂರು: ಪಾವಂಜೆ ಮಹಾಗಣಪತಿ ದೇವಸ್ಥಾನದ ಅಂಗಳದಲ್ಲಿ ಟಿಕ್ಟಾಕ್ ಮಾಡಿದವರ ವಿರುದ್ಧ ದೇವಳದ ಭಕ್ತರಿಂದ ಮತ್ತು ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಳೆಯಂಗಡಿ ಸಮೀಪದ ಪಾವಂಜೆ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮುಲ್ಕಿಯ ಪ್ರತೀಕ್ ಶೆಟ್ಟಿ ಹಾಗೂ ಇಬ್ಬರು ಯುವತಿಯರು ದೇವಾಲಯದಲ್ಲಿ ಅಸಭ್ಯವಾಗಿ ಟಿಕ್ಟಾಕ್ ಮಾಡಿರುವುದಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.
ಇದರಿಂದ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬಂದಿದೆ ಎಂದು ಭಕ್ತರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ದೇವಸ್ಥಾನದ ಆಡಳಿತ ಮಂಡಳಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.














