Coastal Bulletin

ಬಂಟ್ವಾಳ:ಇಲ್ಲಿನ ಜಕ್ರಿಬೆಟ್ಟು ದಾಸ ರೈ ಮೈದಾನದಲ್ಲಿ ಕಳೆದ 18 ವರ್ಷಗಳ ಹಿಂದೆ ಆರಂಭಗೊಂಡು ಈ ಬಾರಿ 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.31 ರಿಂದ ಸೆ.4 ರತನಕ ನಿರಂತರ ಭಜನೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸಹಿತ ವಿವಿಧ ಧಾರ್ಮಿ ಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅರ್ಥಪೂರ್ಣವಾಗಿ ನಡೆಯಲಿದೆ ಆಚರಣಾ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಬಿ.ಸಿ.ರೋಡು ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಲ್ಲಾ ಜಾತಿ ಮತ್ತು ಧರ್ಮಗಳ ಭಕ್ತರ ಒಗ್ಗೂಡುವಿಕೆಯಲ್ಲಿ ಸಾಮರಸ್ಯಕ್ಕಾಗಿ 'ಬಂಟ್ವಾಳದ ಹಬ್ಬ'ವಾಗಿ ಮೂಡಿ ಬರಲಿದೆ ಎಂದರು.

ಬಂಟ್ವಾಳದ ನಾಡಹಬ್ಬವಾಗಿ ಐದು ದಿನಗಳಲ್ಲಿ ನಡೆಯುವ ಈ ವಿನೂತನ ಉತ್ಸವಕ್ಕೆ ವಿವಿಧ ಗ್ರಾಮಗಳಿಂದ ಭಕ್ತರು ಹಸಿರು ಹೊರೆಕಾಣಿಕೆ ಸಮರ್ಪಿಸಲಿದ್ದು, ಪ್ರತಿದಿನ ವಿವಿಧ ಭಜನಾ ತಂಡಗಳಿಂದ ನಿರಂತರ ಭಜನೆ ಸಂಕೀರ್ತಣೆ, ವಿವಿಧ ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಧಾರ್ಮಿಕ ಸಭೆ ನಡೆಯಲಿದೆ. ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಒಡಿಯೂರು ಗುರುದೇವಾನಂದ ಸ್ವಾಮೀಜಿ, ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ, ಮೊಡಂಕಾಪು ಚರ್ಚ್ ನ ಧರ್ಮಗುರು ವಲೇರಿಯನ್ ಡಿಸೋಜ

ಆಶೀರ್ವಚನ ನೀಡುವರು. ಪ್ರಸಿದ್ಧ ಕಲಾವಿದರಿಂದ ನೃತ್ಯ ವೈಭವ, ಸಂಗೀತ ರಸಮಂಜರಿ, ತುಳು ನಾಟಕ, ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಅವರು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಪ್ರಮುಖರಾದ ಚಂದ್ರಪ್ರಕಾಶ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಎಂ.ರಾಜೀವ ಶೆಟ್ಟಿ ಎಡ್ತೂರು, ಎನ್.ಮಹಾಬಲ ಬಂಗೇರ, ಜನಾರ್ದನ ಚೆಂಡ್ತಿಮಾರ್, ಸುಭಾಶ್ಚಂದ್ರ ಶೆಟ್ಟಿ, ಸುಧಾಕರ ಶೆಣೈ ಖಂಡಿಗ, ರಾಜೀವ ಕಕ್ಯಪದವು, ಉಮೇಶ ಕುಲಾಲ್ ನಾವೂರ, ಕೆ.ಪದ್ಮನಾಭ ರೈ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಪ್ರವೀಣ ಜಕ್ರಿಬೆಟ್ಟು, ಲೋಲಾಕ್ಷ ಶೆಟ್ಟಿ, ವೆಂಕಪ್ಪ ಪೂಜಾರಿ, ಸುರೇಶ ಪೂಜಾರಿ ಮತ್ತಿತರರು ಇದ್ದರು.

Leave a Comment