ಮಂಗಳೂರು: ಬೃಹತ್ ಜನಾಂದೋಲನ ಸಭೆಯಲ್ಲಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಿದ ಸೌಜನ್ಯ ನ್ಯಾಯ ಪರ ಹೋರಾಟಗಾರರು. ಸಿದ್ದರಾಮಯ್ಯ ಸರಕಾರ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರುತನಿಖೆ ಮಾಡಿಸಬೇಕು ಇಲ್ಲವಾದಲ್ಲಿ ಶಾಂತಿಯುತವಾದ ನಮ್ಮ ಹೋರಾಟ ಉಗ್ರ ಹೋರಾಟವಾಗಿ ಬದಲಾಗುತ್ತೆ- ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ.

Coastal Bulletin
ಮಂಗಳೂರು: ಬೃಹತ್ ಜನಾಂದೋಲನ ಸಭೆಯಲ್ಲಿ ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸಿದ ಸೌಜನ್ಯ ನ್ಯಾಯ ಪರ ಹೋರಾಟಗಾರರು. ಸಿದ್ದರಾಮಯ್ಯ ಸರಕಾರ ಸೌಜನ್ಯ ಅತ್ಯಾಚಾರ ಪ್ರಕರಣವನ್ನು ಮರುತನಿಖೆ ಮಾಡಿಸಬೇಕು ಇಲ್ಲವಾದಲ್ಲಿ ಶಾಂತಿಯುತವಾದ ನಮ್ಮ ಹೋರಾಟ ಉಗ್ರ ಹೋರಾಟವಾಗಿ ಬದಲಾಗುತ್ತೆ- ಮಹೇಶ್ ಶೆಟ್ಟಿ ತಿಮರೋಡಿ ಎಚ್ಚರಿಕೆ.

ಮಂಗಳೂರು: ಧರ್ಮಸ್ಥಳದಲ್ಲಿ ನಡೆದ 17 ವರ್ಷದ ಬಾಲಕಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿದ ನಂತರ, ಪ್ರಕರಣ ಸರಿಯಾದ ತನಿಖೆ ಸರಿಯಾಗಿ ನಡೆಸಿಲ್ಲ, ಸರಕಾರ ಲೋಪವೆಸಗಿದ ತನಿಖಾಧಿಕಾರಿಗಳ, ವೈದ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಮರುತನಿಖೆ ನಡೆಸಬೇಕೆಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಮಂಗಳೂರಿನ ಗುರುಪುರ ಕೈಕಂಬ ಬಳಿ ಬೃಹತ್ ಜನಾಂದೋಲನ,ಪ್ರತಿಭಟನೆ ನಡೆಯಿತು. ಅತ್ಯಾಚಾರದ ನಂತರ ವೈದ್ಯರು ಸಂಗ್ರಹಿಸಿದ ಮಾದರಿಗಳು ಪ್ರಕರಣಕ್ಕೆ ಪೂರಕವಾಗಿರಲಿಲ್ಲ, ಆದ್ದರಿಂದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಖುಲಾಸೆ ಸಮಿತಿಯ ಮುಂದೆ ಇಡಲು ಇದು ಸೂಕ್ತವಾದ ಪ್ರಕರಣವಾಗಿದೆ ಎಂದು ನ್ಯಾಯಾಲಯವು ತಿಳಿಸಿತ್ತು.

ಸೌಜನ್ಯಳಿಗೆ ನ್ಯಾಯ ಕೊಡಿಸಲು ಪಣತೊಟ್ಟಿರುವ ಹೋರಾಟಗಾರರು ಸೌಜನ್ಯಳ ತಾಯಿ ಕುಸುಮಾವತಿಯವರ ಜೊತೆಗೂಡಿ ಹಲವಾರು ಕಡೆ ಪ್ರತಿಭಟನೆ,ಜನಾಂದೋಲನ ನಡೆಸಿದರಲ್ಲದೆ  ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ,ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಅವರಿಗೂ ಮನವಿ ಸಲ್ಲಿಸಿದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳದೆ ಕೇಂದ್ರ ಸರಕಾರದತ್ತ ಬೊಟ್ಟು ಮಾಡುತ್ತಿದೆ.ಇದುವರೆಗೆ ರಾಜ್ಯ ಸರಕಾರವು

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಮುಂದಿನ ದಿನಗಳಲ್ಲಿ ನಮ್ಮ ಶಾಂತಿಯುತವಾದ ಹೋರಾಟವು ಉಗ್ರ ಹೋರಾಟದ ಸ್ವರೂಪ ಪಡೆಯುವುದು ಎಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ವೇದಿಕೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ,ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ,ಗಿರೀಶ್ ಮಟ್ಟಣ್ಣನವರ್, ತಮ್ಮಣ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Comment