ಬಂಟ್ವಾಳ :ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆ ಇದರ 2023-24 ಹಾಗೂ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭವು ಫೆ. 1ರಂದು ಆದಿತ್ಯವಾರ ಬೆಳಗ್ಗೆ 10.00ರಿಂದ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು, ನೆರವೇರಿಸಲಿದ್ದು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಎಂ. ಎಸ್ ಸಾಧಕರನ್ನು ಅಭಿನಂದಿಸಲಿದ್ದಾರೆ,ಗಣ್ಯ ಅಥಿತಿಯಾಗಿ ಮಾಜಿ ಸಚಿವ ಬಿ. ರಮಾನಾಥ ರೈ ಹಾಗೂ ಅಥಿತಿಗಳಾಗಿ ಮಂಜುನಾಥ್, ತಹಶೀಲ್ದಾರರು ಬಂಟ್ವಾಳ,ಸಚಿನ್ ಕುಮಾರ್, ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಪಂಚಾಯತ್ ಬಂಟ್ವಾಳ, ಡಾ| ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯಾಧಿಕಾರಿಗಳು, ಬಂಟ್ವಾಳ,ಮಾಲತಿ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಂಟ್ವಾಳ,ತಾರಾನಾಥ ಸಾಲ್ಯಾನ್
ಪಿ. ಎ ಇ ಇ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಬಂಟ್ವಾಳ,
ಲಯನ್ ಪಿ. ಲೋಕನಾಥ ಶೆಟ್ಟಿ ಅಧ್ಯಕ್ಷರು, ಪಿಂಚಣಿದಾರರ ಸಂಘ, ಬಂಟ್ವಾಳ,ಉಮಾನಾಥ ರೈ ಮೇರಾವು, ನಿಕಟಪೂರ್ವ ಅಧ್ಯಕ್ಷರು, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ, ಬಂಟ್ವಾಳ ತಾಲೂಕು ಶಾಖೆ ಇವರು ಉಪಸ್ಥಿತರಿರುವರು ಎಂದು ರಾಜ್ಯ ಸರಕಾರಿ ನೌಕರರ ಸಂಘ, ಬಂಟ್ವಾಳ ತಾಲೂಕು ಶಾಖೆಯ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ಹಾಗೂ ಪ್ರ ಕಾರ್ಯದರ್ಶಿ ಸಂತೋಷ್ ಕೋಟ್ಯಾನ್ ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














