Coastal Bulletin

ಬಂಟ್ವಾಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸೋಮವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಕಾರ್ಕಳ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಈ ಸಭೆಯಲ್ಲಿ ಹಾಜರಿದ್ದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಗಮನ ಸೆಳೆದರು.

ಉಭಯ ಜಿಲ್ಲೆಗಳಲ್ಲಿನ ಪ್ರಮುಖ ಸಮಸ್ಯೆಗಳಾದ ವಾಸ್ತವ್ಯ ಹಾಗೂ ವಾಣಿಜ್ಯ ಉದ್ದೇಶದ ಭೂ ಪರಿವರ್ತನೆ ವಿಳಂಬ, 9/11 ಸಮಸ್ಯೆ, ಭೂ ಪರಿವರ್ತಿತ ಗ್ರಾಮೀಣ ಭಾಗದ ನಿವೇಶನಗಳಿಗೆ ಅನುಮತಿ ನೀಡುವ ಅಧಿಕಾರವನ್ನು ನಗರ ಪ್ರಾಧಿಕಾರಕ್ಕೆ ವರ್ಗಾವಣೆಯಿಂದಾದ

ಸಮಸ್ಯೆಗಳ ಬಗ್ಗೆ ಮತ್ತು ಪ್ರಮುಖವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ವಾಸ್ತವ್ಯ ಹಾಗೂ ವಾಣಿಜ್ಯ ಉದ್ದೇಶಕ್ಕೆ 10 ಸೆಂಟ್ಸ್‌ವರೆಗಿನ ಭೂ ಪರಿವರ್ತನೆಯನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ, ಶಾಸಕರುಗಳಾದ ವೇದವ್ಯಾಸ ಕಾಮತ್,ಡಾ.ವೈ.ಭರತ್ ಶೆಟ್ಟಿ,ರಘುಪತಿಭಟ್ ,ಹರೀಶ್ ಕುಮಾರ್ ಹಾಗೂ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Leave a Comment