ಬಂಟ್ವಾಳ : ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎಲ್ಲರೂ ಕಡ್ಡಾಯವಾಗಿ ಹಾಗೂ ಕಟ್ಟುನಿಟ್ಟಾಗಿ ನೀತಿ ಸಂಹಿತೆಯನ್ನು ಪಾಲಿಸಬೇಕು. ನೀತಿ ಸಂಹಿತೆಯನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ೨೦೫ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ನಿಯುಕ್ತಿಗೊಂಡಿರುವ ಚುನಾವಣಾಧಿಕಾರಿ ಅಭಿದ್ ಗಡ್ಯಾಲ್ ಹೇಳಿದರು.
ಬಂಟ್ವಾಳ ತಾಲೂಕು ಆಡಳಿತ ಸೌಧದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಕರೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಚುನಾವಣಾ ಕರ್ತವ್ಯ ಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಗಿದ್ದು, ಅಧಿಕಾರಿಗಳ ತಂಡವನ್ನು ರಚಿಸಿಕೊಳ್ಳಲಾಗಿದೆ. ರಾಜಕೀಯ ಸಭೆಯನ್ನು
ನಡೆಸಲು ಕಡ್ಡಾಯವಾಗಿ ಚುನಾವಣಾಧಿಕಾರಿ ಕಚೇರಿಯಿಂದ ಅನುಮತಿ ಪಡೆದುಕೊಳ್ಳಬೇಕು. ಮದುವೆ, ಮೊದಲಾದ ಖಾಸಗಿ ಉತ್ಸವಗಳಿಗೆ ಚುನಾವಣಾಧಿಕಾರಿಯಿಂದ ಅನುಮತಿ ಪಡೆದು,ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯಕ್ರಮ ನಡೆಸುವ ಬಗ್ಗೆ ಒಪ್ಪಿಗೆ ಪತ್ರ ನೀಡಬೇಕು ಎಂದು ತಿಳಿಸಿದರು.














