breaking news

Coastal Bulletin

ಬಂಟ್ವಾಳ: ಪ್ರಸಕ್ತ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಸೇರಿದಂತೆ ಮುಂಬರುವ ಮಳೆಗಾಲದಲ್ಲಿ ಪ್ರವಾಹ ಮತ್ತಿತರ ಪ್ರಾಕೃತಿಕ ವಿಕೋಪ ತಡೆಗೆ ಮುಂಜಾಗ್ರತೆ ವಹಿಸುವುದರ ಜೊತೆಗೆ ಇಂತಹ ಸಂಕಷ್ಟ ಎದುರಿಸಲು ಪ್ರತೀ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಸಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸಹಿತ ಪಿಡಿಒ ಮತ್ತಿತರ ಅಧಿಕಾರಿಗಳ

ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು.

ತಹಸೀಲ್ದಾರ್ ಎಸ್.ಬಿ.ಕೂಡಲಗಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಮತ್ತಿತರರು ಇದ್ದರು.  

Leave a Comment