ಬಂಟ್ವಾಳ:ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಕಳೆದ 2009ರಲ್ಲಿ ಆರಂಭಗೊಂಡ ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾ ವಿದ್ಯಾಲಯದಲ್ಲಿ 'ಸ್ವಸ್ಥ ಭಾರತಕ್ಕಾಗಿ ಸ್ವಚ್ಛ ಪರಿಸರ' ವಿಷಯಕ್ಕೆ ಸಂಬಂಧಿಸಿದಂತೆ ಜೂ. 1ರಂದು ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಾಲೇಜಿನ ಸಂಸ್ಥಾಪಕ ಡಾ.ಕೆ ಪ್ರಭಾಕರ ಭಟ್ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡಿನಲ್ಲಿ ಮೇ 29ರಂದು ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, 'ಪ್ರಕೃತಿ ಜೊತೆಗೆ ನೂರಾರು ವರ್ಷ ಜೀವನ ನಡೆಸುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೂ ಪ್ರಕೃತಿ ಸಂರಕ್ಷಣೆ ಎಂಬ ಮಹತ್ತರ ಜವಾಬ್ದಾರಿಯೂ ಇದೆ ಎಂಬ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ' ಎಂದರು.
ಜೂ. 1ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ಅದಮ್ಯ ಚೇತನ ಫೌಂಡೇಶನ್ ಸಂಸ್ಥಾಪಕಿ ತೇಜಸ್ವಿನಿ ಅನಂತ ಕುಮಾರ್ ವಿಚಾರ ಸಂಕಿರಣ ಉದ್ಘಾಟಿಸಲಿದ್ದು, ಶ್ರೀರಾಮ ವಿದ್ಯಾ ಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಅಧ್ಯಕ್ಷತೆ ವಹಿಸುವರು ಎಂದರು.
ಅಂದು ಬೆಳಿಗ್ಗೆ ಗಂಟೆ 10.40ಕ್ಕೆ ಪರಿಸರ ಚಿಂತಕ ಶಿವಾನಂದ ಕಳವೆ ಇವರಿಂದ 'ಜಲ ಮತ್ತು ಮರ ಜಾಗೃತಿಯ ದೇಸಿ ದಾರಿ' ಬಗ್ಗೆ ಗೋಷ್ಠಿ ನಡೆಯಲಿದ್ದು, 11.35ಕ್ಕೆ ಸಾವಯವ
ಕೃಷಿಕ ವಸಂತ ಕಜೆ ಇವರಿಂದ 'ಮಣ್ಣು ಮತ್ತು ಆಹಾರ ವಿಷವಾಗುವತ್ತ' ಗೋಷ್ಠಿ, 12.20ಕ್ಕೆ ರಾಜ್ಯ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರ ನಿಕಟಪೂರ್ವ ಅಧ್ಯಕ್ಷ ಡಾ.ಕೆ.ಆರ್.ಶ್ರೀಹರ್ಷ ಇವರಿಂದ 'ಸಮಗ್ರ ತ್ಯಾಜ್ಯ ನಿರ್ವಹಣೆಯ ವಿವಿಧ ಆಯಾಮಗಳು' ಗೋಷ್ಠಿ, 2 ಗಂಟೆಗೆ ಉಪನ್ಯಾಸಕ ಡಾ.ನರೇಂದ್ರ ರೈ ದೇರ್ಲ ಇವರಿಂದ 'ಆರಾಧನೆ ಮತ್ತು ನಂಬಿಕೆಗಳಲ್ಲಿ ಪರಿಸರ ಉಳಿವಿನ ದೃಷ್ಟಿ' ಗೋಷ್ಠಿ, 2.50ಕ್ಕೆ ಪಯರ್ಾವರಣ ಸಂರಕ್ಷಣ ಗತಿವಿಧಿ ಪ್ರಾಂತ ಸಂಯೋಜಕ ವೆಂಕಟೇಶ್ ಸಂಗನಾಳ ಇವರಿಂದ 'ಪರಿಸರ ಸ್ನೇಹಿ ಜೀವನ ಪದ್ಧತಿ' ಬಗ್ಗೆ ಗೋಷ್ಠಿಯ ನಡೆಯಲಿದೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀರಾಮ ವಿದ್ಯಾ ಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ, ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಸಂಚಾಲಕ ವಸಂತ ಮಾಧವ ಇದ್ದರು.









