Coastal Bulletin

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇವರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ 118ನೇ ರಕ್ತದಾನ ಶಿಬಿರ ಭಾನುವಾರ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.

ಶಿಬಿರವನ್ನು ಅಮ್ಮುಂಜೆ ವೀರಯೋಧ ಯಾಧವ ಫ್ರೆಂಡ್ಸ್‌ನ ಅಧ್ಯಕ್ಷ ಸತ್ಯಪ್ರಸಾದ್ ಶೆಟ್ಟಿ ಅಮ್ಮುಂಜೆ ಸ್ವಯಂ ರಕ್ತದಾನ ಮಾಡುವ ಮೂಲಕ ಉದ್ಘಾಟಿಸಿದರು. ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿ ರಕ್ತದಾನದಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸುವುದರೊಂದಿಗೆ ನಾವು ಮಾನಸಿಕವಾಗಿ ದೈಹಿಕವಾಗಿ ಸದೃಢರಾಗಿರಲು ಸಾಧ್ಯವಿದೆ, ಹೃದಯ ಸಂಬಂಧಿ ರೋಗಗಳಿಂದ ದೂರವಿರಬಹುದಾಗಿದೆ ಎಂದು ತಿಳಿಸಿದರು. ಕಳೆದ ೨೮ ವರ್ಷಗಳಿಂದ ಸೇವಾಂಜಲಿ ಪ್ರತಿಷ್ಠಾನ ನಿರಂತರವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡು ಬರುತ್ತಿರುವುದು ಹೆಮ್ಮಯ ವಿಚಾರ ಎಂದರು.

ಕೆಎಂಸಿ ಆಸ್ಪತ್ರೆಯ ರಕ್ತಕೇಂದ್ರದ ವೈದ್ಯೆ ಡಾ. ದೀಕ್ಷಾ ರಕ್ತದಾನದ ಮಹತ್ವ ಹಾಗೂ ರಕ್ತದಾನಿಗಳಿಗಾಗುವ ಪ್ರಯೋಜನದ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಸೇವಾಂಜಲಿ

ಆರೋಗ್ಯ ಕೇಂದ್ರದ ವೈದ್ಯ ಡಾ. ಚೇತನ್, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿ ಪದ್ಮನಾಭ ಶೆಟ್ಟಿ ಪುಂಚಮೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿ, ವಂದಿಸಿದರು. ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಪಕ ಜಯರಾಂ ತುಂಬೆ, ಸುರೇಸ್ ರೈ ಪೆಲಪಾಡಿ ಸಂಯೋಜಕರಾದ ಜಗದೀಪ್ ಕುಂಪಣಮಜಲು, ಬಾಲಕೃಷ್ಣ ರೈ ದೇವಸ್ಯ, ನವೀನ್ ಶೆಟ್ಟಿ ತುಪ್ಪೆಕಲ್ಲು, ಧನರಾಜ್ ತುಂಬೆ, ಲೋಕೇಶ್ ಕಲ್ಲತಡಮೆ, ಅಶೋಕ್ ಕುಲಾಲ್ ರಾಮಲ್‌ಕಟ್ಟೆ, ನಾರಾಯಣ ಬೆಳ್ಚಾಡ ಮೇರಮಜಲು, ಪ್ರಶಾಂತ್ ತುಂಬೆ, ಅರ್ಜುನ್ ಪೂಂಜಾ ಸಹಕರಿಸಿದರು.

ವೀರ ಯೋಧ ಯಾದವ ಫ್ರೆಂಡ್ಸ್‌ನ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಮಧ್ಯಾಹ್ನದ ವೇಳೆಗೆ 106 ಯುನಿಟ್ ರಕ್ತಸಂಗ್ರಹವಾಯಿತು. 

Leave a Comment