ಅಮ್ಮೆಮಾರ್ :ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರದ ಉದ್ಘಾಟನಾ ಸಮಾರಂಭ.

Coastal Bulletin
ಅಮ್ಮೆಮಾರ್ :ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರದ ಉದ್ಘಾಟನಾ ಸಮಾರಂಭ.

ಬಂಟ್ವಾಳ: ಅನಾರೋಗ್ಯ ಬಂದಾಗ ಮಾತ್ರವಲ್ಲದೆ ಆರೋಗ್ಯವಂತರಾಗಿರುವಾಗಲೂ ಕೂಡ ನಿಯಮಿತವಾಗಿ ಆರೋಗ್ಯ ತಪಾಸಣೆ ನಡೆಸಬೇಕು. ಪ್ರತೀ ೬ ತಿಂಗಳಿಗೊಮ್ಮೆ ರಕ್ತದೊತ್ತಡ, ಡಯಾಬಿಟಿಸ್ ಮತ್ತಿತರ ಪರೀಕ್ಷೆಗಳನ್ನು ಮಾಡಿಕೊಂಡು ಆರೋಗ್ಯ ಕಾಳಜಿ ವಹಿಸಬೇಕು ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದರು.

ಪುದು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಪುದು ಇದರ ಸಹಭಾಗಿತ್ವದಲ್ಲಿ ಸ್ಥಳೀಯ ಪಂಚಾಯತ್ ಸದಸ್ಯ ಅಖ್ತರ್ ಹುಸೇನ್ ಅವರ ನೇತೃತ್ವದಲ್ಲಿ ಫರಂಗಿಪೇಟೆಯ ಅಮ್ಮೆಮಾರಿನಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರದ ಉದ್ಘಾಟನಾ ಸಮಾರಂಭ ಹಾಗೂ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳ ವೀಕ್ಷಣೆ ನಡೆಸಿ ಅಮ್ಮೆಮಾರ್ ಶಾಲೆಯ ಸಭಾಂಗಣದಲ್ಲಿ ನಡೆದ ಸಭಾಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಮ್ಮೆಮಾರ್ ಮಾದರಿ ಪ್ರದೇಶವಾಗಿದ್ದು ಅನೇಕ ಅಭಿವೃದ್ದಿ ಕಾರ್ಯಗಳು ನಡೆದಿದೆ. ಉಳಿದ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು. ಬಿಜೆಎಂ ಜುಮ್ಮಾ ಮಸೀದಿಯ ಅಧ್ಯಕ್ಷ ಉಮ್ಮರಬ್ಬ ಎ.ಎಸ್.ಬಿ ಅವರು ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರವನ್ನು ಉದ್ಘಾಟಿಸಿದರು. 

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ. ಕೃಷ್ಣಕುಮಾರ್ ಪೂಂಜ, ಪುದು ಪಂಚಾಯತ್ ಮಾಜಿ ಅಧ್ಯಕ್ಷ ಪ್ರಕಾಶ್ಚಂದ್ರ ರೈ ದೇವಸ್ಯ ದೀಪ ಪ್ರಜ್ವಲಿಸಿದರು. 

ಮುಖ್ಯ ಅತಿಥಿಗಳಾಗಿ ಡಾ. ಸುದರ್ಶನ್, ಪುದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅನ್ಲಿಲಾ ಪತ್ರಾವೋ, ಪುದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹರೀಶ್ ಕೆ.ಎ, ಪಂಚಾಯತ್ ರಾಜ್ ಉಪವಿಭಾಗದ ಕಿರಿಯ ಅಭಿಯಂತರ ರವಿ, ಹಿರಿಯ ನಾಗರಿಕ ಎಫ್.ಎ. ಖಾದರ್, ಫರಂಗಿಪೇಟೆ ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರ ಕಂಬಳಿ, ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಜಬ್ಬಾರ್ ಮಾರಿಪಳ್ಳ, ಪುದು ಪಂಚಾಯತಿ ಸದಸ್ಯರಾದ ಅಖ್ತಾರ್ ಹುಸೈನ್ ಎಂ.ಎಂ., ಹಾಶೀರ್ ಪೇರಿಮಾರ್, ಕಿಶೋರ್ ಕುಮಾರ್ ಸುಜೀರ್, ಫೈಝಲ್ ಅಮ್ಮೆಮಾರ್, ರಿಯಾಝ್ ಅಮ್ಮೆಮಾರ್, ಝಾಹೀರ್ ಅಬ್ಬಾಸ್ ಕುಂಪಣಮಜಲು, ಆತೀಕಾ ಅಮ್ಮೆಮಾರ್, ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಕಾರ್ಯದರ್ಶಿ ಫಯಾಝ್ ಅಮ್ಮೆಮಾರ್, ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಜಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮದ್ ಮೇಲ್ಮನೆ, ಮೇರಮಜಲು ಪಂಚಾಯತ್ ಸದಸ್ಯ ಯೋಗೀಶ್ ಪ್ರಭು, ಪುದು ಪಂಚಾಯತಿ ಮಾಜಿ ಸದಸ್ಯರಾದ ಎಂ.ಕೆ. ಖಾದರ್, ಲತೀಫ್ ಹತ್ತನೆಮೈಲಿಕಲ್ಲು, ಅಮ್ಮೆಮಾರ್ ವಾರ್ಡ್ ಯುವ ಕಾಂಗ್ರೆಸ್ ಅಧ್ಯಕ್ಷ ಝುಬೈರ್, ಮುಸ್ತಾಫ ಅಮ್ಮೆಮಾರ್, ದಾವೂದ್ ಅಮ್ಮೆಮಾರ್ ಮೊದಲಾದವರು ಉಪಸ್ಥಿತರಿದ್ದರು.

Leave a Comment