ಮಂಗಳೂರು :ಎರಡು ದಿನಗಳಿಂದ ವರುಣನ ಆರ್ಭಟ ಜೋರಾಗಿದೆ. ನಾಳೆಯೂ ಇದೇ ರೀತಿ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.
ನಾಳೆ ದಕ್ಷಿಣ ಕನ್ನಡದಲ್ಲಿ ಜೋರು ಮಳೆಯಾಗುವ ಹಿನ್ನೆಲೆಯಲ್ಲಿ ಶಾಲಾ- ಕಾಲೇಜಿಗೆ ರಜೆ
ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಹೇಳಿದ್ದಾರೆ. ಇದರ ಜೊತೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದಾರೆ.
















