ಬಂಟ್ವಾಳ:ಇಲ್ಲಿನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋರ್ವಳು ಸೋಮವಾರ ರಾತ್ರಿ ಎಂದಿನಂತೆ ತಮ್ಮ ಹಂಚಿನ ಮನೆಯ ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ಗೋಡೆ ಸೆರೆ ಮಧ್ಯೆ ಮೊಬೈಲ್ ಮೂಲಕ ವೀಡಿಯೋ ಚಿತ್ರೀಕರಣ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಮೊಬೈಲ್ ಚಿತ್ರೀಕರಣ ಮಾಡುವುದನ್ನು ಗಮನಿಸಿದ ಮಹಿಳೆ ಕೂಡಲೇ ಬೊಬ್ಬೆ ಹಾಕಿದಾಗ ಆರೋಪಿ ಪರಾರಿಯಾಗಿದ್ದಾನೆ. ಇದೇ ವೇಳೆ ಬೊಬ್ಬೆ ಕೇಳಿ ಇವರ ತಾಯಿ ಮತ್ತು ಸ್ಥಳೀಯರು ಬಂದು ಹುಡುಕಾಡಿ ಸಿಗದೆ ಬಳಿಕ
ಪೊಲೀಸರಿಗೆ ದೂರಿಕೊಂಡಿದ್ದರು. ಈ ಬಗ್ಗೆ ಪೊಲೀಸರು ಮಂಗಳವಾರ ಕಾರ್ಯಾಚರಣೆ ನಡೆಸಿ ಆರೋಪಿ ಬಂಟ್ವಾಳ ನಿವಾಸಿ ಜಗದೀಪ್ ಆಚಾರ್ಯ (32) ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿಸಿದ್ದಾರೆ.















