breaking news

ಬಂಟ್ವಾಳ :ಸಮಾಜ ಸೇವಾ ಸಹಕಾರಿ ಸಂಘಕ್ಕೆ 4ನೇ ಬಾರಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪುರಸ್ಕಾರ.

Coastal Bulletin
ಬಂಟ್ವಾಳ :ಸಮಾಜ ಸೇವಾ ಸಹಕಾರಿ ಸಂಘಕ್ಕೆ 4ನೇ ಬಾರಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಸಾಧನಾ ಪುರಸ್ಕಾರ.

ಬಂಟ್ವಾಳ: ಇಲ್ಲಿನ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳವು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾಜ ಸೇವಾ ಸಹಕಾರಿ ಸಂಘವು 2024-25ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ರೂ. ವ್ಯವಹಾರ ನಡೆಸಿ 5.04 ಕೋಟಿ ರೂ. ಲಾಭ ಗಳಿಸಿದೆ. ಸಂಘದ ದುಡಿಯುವ ಬಂಡವಾಳವು 259.66 ಕೋಟಿ ರೂ. ಆಗಿದೆ. ಆಡಿಟ್ ವರ್ಗೀಕರಣದಲ್ಲಿ ಸತತ ‘ಎ’ ಶ್ರೇಣಿ ಪಡೆದಿರುತ್ತದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆ ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರು, ಸತತ ನಾಲ್ಕನೇ ಬಾರಿ ಸಾಧನಾ ಪುರಸ್ಕಾರ ನೀಡಿ

ಗೌರವಿಸಿದರು. ಸಂಘದ ಅಧ್ಯಕ್ಷರಾದ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕರಾದ ಭೋಜ ಮೂಲ್ಯ, ಪ್ರಶಸ್ತಿ ಸ್ವಿಕರಿಸಿದರು. ಸಂಘದ ಉಪಾಧ್ಯಕ್ಷರಾದ ಜನಾರ್ದನ ಬೊಂಡಾಲ, ನಿರ್ದೇಶಕರಾದ ಬಿ.ರಮೇಶ್ ಬಿ.ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಕಿರಣ್ ಕುಮಾರ್ ಎ., ಅರುಣ್ ಕುಮಾರ್ ಕೆ. ಮತ್ತು ಸಿಬ್ಬಂದಿ ವಸಂತ ಎಂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್. ರಮೇಶ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ ಕೋಟ್ಯಾನ್, ಕೆ. ಜೈರಾಜ್ ಬಿ. ರೈ ಮೊದಲಾದವರು ಉಪಸ್ಥಿತರಿದ್ದರು.

Leave a Comment