ಬಂಟ್ವಾಳ:ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಪುತ್ತೂರು 2024-25ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ ಶನಿವಾರ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಜಿಲ್ಲೆಗಳಿಗೆ ಕಾರ್ಯವ್ಯಾಪ್ತಿಯನ್ನು ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಸಾಧನೆಗೆ ಸತತ 6ನೇಬಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಯಾಗಿದೆ.2 ಬಾರಿ ಸಹಕಾರ ಸಪ್ತಾಹದಲ್ಲಿ ವಿಭಾಗ ಮಟ್ಟದ ಪ್ರಶಸ್ತಿ ಪಡೆದ, ರಾಜ್ಯ ಸರ್ಕಾರದ ಪಾಲು ಬಂಡವಾಳ ಹೊಂದಿರುವ ಸಂಸ್ಥೆಯಾಗಿದೆ. ಸುದೀರ್ಘ 65 ವರ್ಷಗಳ ಇತಿಹಾಸ ಹೊಂದಿರುವ, ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆಯ ಅಭಿವೃದ್ಧಿಗಾಗಿ ಸಹಕಾರಿ ಕ್ಷೇತ್ರದಲ್ಲಿ ತನ್ನ ಕಾರ್ಯ ಯೋಜನೆಯನ್ನು ರೂಪಿಸಿ ಬೆಳೆಸುತ್ತಿರುವ ಸಹಕಾರ ಸಂಘವು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 16 ಶಾಖೆಗಳನ್ನು ಹೊಂದಿದೆ. ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ಕುಂಬಾರಿಕಾ ಉತ್ಪಾದನಾ ತರಬೇತಿ ಕೇಂದ್ರವನ್ನು ಹೊಂದಿದ್ದು,ಈ ಭಾಗದ ಕುಶಲ ಕರ್ಮಿಗಳ ಉತ್ಪನ್ನಗಳಿಗೆ ಯೋಗ್ಯ ಮಾರುಕಟ್ಟೆ ಒದಗಿಸುತ್ತಿದೆ. ಸಹಕಾರ ಸಂಘವು ಎಲ್ಲವರ್ಗದ ಸದಸ್ಯರಿಗೆ ನೆರವನ್ನು 2024-25ನೇ ಸಾಲಿನಲ್ಲಿ
626 ಕೋಟಿ ರೂಪಾಯಿ ವ್ಯವಹಾರವನ್ನು ದಾಖಲಿಸಿ 2.65 ಕೋಟಿ ರೂಪಾಯಿ ನಿವ್ವಳ ಲಾಭವನ್ನು ಗಳಿಸಿದೆ.ಸಂಘವು 116.71 ಕೋಟಿ ರೂಪಾಯಿ ಠೇವಣಿಯನ್ನು ಹೊಂದಿರುತ್ತದೆ. ಲೆಕ್ಕ ಪರಿಶೋಧನೆಯಲ್ಲಿ ನಿರಂತರವಾಗಿ 'ಎ' ದರ್ಜೆಯನ್ನು ಕಾಯ್ದುಕೊಂಡಿರುತ್ತದೆ. ಸಹಕಾರ ಸಂಘದ ಹೆಚ್ಚಿನ ಶಾಖೆಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ ಅಳವಡಿಸಿ ಸುಸಜ್ಜಿತ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸಲಾಗುತ್ತಿದೆ. ಸಂಘದ ಸದಸ್ಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಗಳನ್ನು ನೀಡಲಾಗುತ್ತಿದ್ದು, ಸದಸ್ಯರ ಠೇವಣಿಗಳಿಗೆ ಆಕರ್ಷಕ ದರದ ಬಡ್ಡಿಯನ್ನು ನೀಡಲಾಗುತ್ತಿದೆ.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು, ಸತತ ನಾಲ್ಕನೇ ಬಾರಿ ಸಾಧನಾ ಪುರಸ್ಕಾರ ನೀಡಿ ಗೌರವಿಸಿದರು,ಕುಂಬಾರದ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷದ ವಕೀಲ ಭಾಸ್ಕರ ಎಂ ಪೆರುವಾಯಿ, ಉಪಾಧ್ಯಕ್ಷ ದಾಮೋದರ ಕುಲಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ದನ ಮೂಲ್ಯ ಎಸ್ ಹಾಗೂ ನಿರ್ದೇಶಕರು ಪ್ರಶಸ್ತಿ ಸ್ವೀಕರಿಸಿದರು.














