ಬೆಂಗಳೂರು: ತೀವ್ರ ಬೆನ್ನುನೋವಿನಿಂದ ಬಳಲುತ್ತಿರುವ ಕಾರಣದಿಂದಾಗಿ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ 6 ವಾರಗಳ ಕಾಲ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ, ಅ 30 ಬುಧವಾರ ಹೈಕೋರ್ಟ್ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.131 ದಿನಗಳ ಬಳಿಕ ದರ್ಶನ್ ಜೈಲಿನಿಂದ ಹೊರಬರಲಿದ್ದಾರೆ.
ಚಿತ್ರದುರ್ಗದ ರೇಣುಕಸ್ವಾಮಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್
ಅವರಿಗೆ ಚಿಕಿತ್ಸೆ ಪಡೆದುಕೊಳ್ಳಲು ಇದ್ದ ಅಡ್ಡಿ ನಿವಾರಣೆಯಾಗಿದ್ದು ತಕ್ಕ ಮಟ್ಟಿಗಿನ ರಿಲೀಫ್ ಸಿಕ್ಕಂತಾಗಿದೆ.















