Coastal Bulletin

ಬಂಟ್ವಾಳ :ಶಂಭೂರಿನ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮವು ಇಂದು ನಡೆಯಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಜಿನ್ನಪ್ಪ, ಉಷಾ, ವೇದಾವತಿ, ಶಾಲಾ

ಶಿಕ್ಷಕರು ಉಪಸ್ಥಿತರಿದ್ದರು.

ಸರಕಾರದ ವತಿಯಿಂದ ನೀಡಲ್ಪಟ್ಟ ಪಾದರಕ್ಷೆಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಮುಖ್ಯ ಶಿಕ್ಷಕ ಕಮಲಾಕ್ಷ ಕಲ್ಲಡ್ಕ ಸ್ವಾಗತಿಸಿ, ಶಿಕ್ಷಕ ಹರಿಪ್ರಸಾದ್ ವಂದಿಸಿದರು.

Leave a Comment