Coastal Bulletin

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೂರಿಯಾಳ ಗ್ರಾಮದ ಒಳಗುಡ್ಡೆ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ಪ್ರತಿಷ್ಠಾ ದೊಂದಿ ನೇಮೋತ್ಸವ ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮತ್ತು ತಂತ್ರಿ ಏರ್ಯ ನರಸಿಂಹ ಮಯ್ಯ ಅವರ ನೇತೃತ್ವದಲ್ಲಿ ಡಿ.31ರಿಂದ ಜ.1ರವರೆಗೆ ನಡೆಯಲಿದೆ.

ಡಿ.31ರಂದು ರಾತ್ರಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಲಿದೆ. ಜ.1ರಂದು ಬೆಳಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು, ಬೆಳಗ್ಗೆ 10.43ಕ್ಕೆ ಬಿಂಬ

ಪುನರ್ ಪ್ರತಿಷ್ಠೆ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಭಂಡಾರ ಆಗಮಿಸಿ ಪ್ರತಿಷ್ಠಾ ದೊಂದಿ ನೇಮೋತ್ಸವ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Leave a Comment