ಪುತ್ತೂರು: ಪುತ್ತೂರು ನಗರ ಸಭೆಯಲ್ಲಿ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ರಲ್ಲಿ ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1 ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.
ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ ಹಾಗೂ 6 ಮತ ನೋಟಾ ಕ್ಕೆ ಚಲಾವಣೆಯಾಗಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ 31 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.
ವಾರ್ಡ್ 1 ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ
ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದ್ದು. ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.ಹೀಗಾಗಿ ಪುತ್ತೂರು ನಗರ ಸಭೆಯಲ್ಲಿ ತೆರವಾಗಿದ್ದ 2 ಸ್ಥಾಗಳಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಒಂದು ಸ್ಥಾನದಂತೆ ಗೆಲುವು ಸಾಧಿಸಿದ್ದು, ಬಿಜೆಪಿಗೆ ಸೆಡ್ಡು ಹೊಡೆದ ಪುತ್ತಿಲ ಪರಿವಾರಕ್ಕೆ ತೀವ್ರ ನಿರಾಶೆಯಾಗಿದೆ.














