ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಎ.ಜೆ. ಇನ್ಸ್ಟಿಟ್ಯೂಟ್ ಇಂಜಿನಿಯರಿಂಗ್ ಆಯಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಉದ್ಯೋಗ ಮೇಳಕ್ಕೆ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಇಂದು ಬೆಳಗ್ಗೆ ಚಾಲನೆ ನೀಡಿದರು.
ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ,
ಮೇಯರ್ ಪ್ರೇಮಾನಂದ ಶೆಟ್ಟಿ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಕೌಶಲ್ಯಾಭಿವೃದ್ದಿ ಇಲಾಖೆಯ ಹೇಮಚಂದ್ರ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.














