ಬಂಟ್ವಾಳ :ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳನ್ನು ಹಾಗೂ ಸವಲತ್ತುಗಳನ್ನು ಸಾರ್ವಜನಿಕರಿಗೆ ತಿಳಿಯಪಡಿಸುವ ಬೀದಿನಾಟಕ ತಂಡವನ್ನು ಬಂಟ್ವಾಳ ವಿಧಾಸಭಾ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಅಣ್ಣಳಿಕೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬಂಟ್ವಾಳ ಮಂಡಲದ ಅಧ್ಯಕ್ಷರು ಶ್ರೀ ದೇವಪ್ಪ ಪೂಜಾರಿ ದೀಪ ಬೆಳಗಿಸಿ ಚಾಲನೆ ನೀಡಿದರು. ಕಲೆ ಹಾಗೂ ಸಾಂಸ್ಕೃತಿಕ ಪ್ರಕೋಷ್ಟದ ಜಿಲ್ಲಾಧ್ಯಕ್ಷರು ಸರಪಾಡಿ ಅಶೋಕ್ ಶೆಟ್ಟಿ , ಬಂಟ್ವಾಳ ಮಂಡಲದ ಕಾರ್ಯದರ್ಶಿ ರಮನಾಥ ರಾಯಿ, ಹಿಂದುಳಿದ ವರ್ಗದ ಜಿಲ್ಲಾ ಪ್ರಧಾನ
ಕಾರ್ಯದರ್ಶಿ ವಸಂತ ಕುಮಾರ್ ಅಣ್ಣಳಿಕೆ, ಕಲೆ ಹಾಗೂ ಸಾಂಸ್ಕೃತಿಕ ಪ್ರಕೋಷ್ಟ ಬಂಟ್ವಾಳದ ದಿನೇಶ್ ಸುವರ್ಣ ರಾಯಿ, ರಾಯಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ರವೀಂದ್ರ ಪೂಜಾರಿ ಬದನಡಿ, ದಿನೇಶ್ ಶೆಟ್ಟಿ, ಪುಷ್ಪಾವತಿ, ಗುಣವತಿ ಮತ್ತಿತರರು ಉಪಸ್ಥಿತರಿದ್ದರು.















