Coastal Bulletin

ಬಂಟ್ವಾಳ: ವಿಧಾನಸಭೆ ವಿರೋಧ ಪಕ್ಷದ ಉಪನಾಯಕನಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಇಲ್ಲಿನ ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಸೋಮವಾರ ಬಂಟ್ವಾಳದ ಮನೆಗೆ ಭೇಟಿಯಾಗಿ ಆಶೀರ್ವಾದ ಪಡೆದರು.

ನಾನು ವಿದ್ಯಾರ್ಥಿ ದೆಸೆಯಲ್ಲಿ ಇದ್ದಾಗ ಅಂದು ಬಿ. ಜನಾರ್ದನ ಪೂಜಾರಿ ಅವರು ನನಗೆ ಪ್ರಥಮ ಬಾರಿಗೆ ಎನ್ ಎಸ್ ಯು ಐ ಕಾರ್ಯದರ್ಶಿ ಹುದ್ದೆ ನೀಡಿದ್ದರು. ಹೀಗಾಗಿ ಅವರ ಆಶೀರ್ವಾದ ಪಡೆದಿದ್ದೇನೆ. ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರು ಪಕ್ಷದ ಹಿರಿಯ ನಾಯಕರಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಅವರು ಕಾಂಗ್ರೆಸ್ನಲ್ಲೇ ಇರುತ್ತಾರೆ ಎಂದರು.

ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಉಳ್ಳಾಲ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ, ಪುದು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಉಮ್ಮರ್ ಫಾರೂಕ್, ಇರಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಜಿಲ್ಲಾ ಕಾಂಗ್ರೆಸ್ ಒಬಿಸಿ ಘಟಕದ ಉಪಾಧ್ಯಕ್ಷ ದಿನೇಶ್ ಪೂಜಾರಿ, ಪ್ರಮುಖರಾದ ಜಬ್ಬಾರ್ ಬೋಳಿಯಾರ್, ಮಜೀದ್ ಫರಂಗಿಪೇಟೆ, ಇಕ್ಬಾಲ್ ಸುಜೀರ್ ಇದ್ದರು. ಇದೇ ವೇಳೆ ಮಾಜಿ ಸಚಿವ ಬಿ.ರಮಾನಾಥ ರೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

Leave a Comment