Coastal Bulletin

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್, ಬಂಟ್ವಾಳ ಇದರ ವತಿಯಿಂದ ವಗ್ಗ ವಲಯದ ಉಳಿ ಒಕ್ಕೂಟಗಳ ಪದಗ್ರಹಣ, ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಕಕ್ಯಪದವು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಶ್ರೀ ಕ್ಷೇತ್ರದ ತಂತ್ರಿ ವೇ.ಮೂ.ಶ್ರೀನಿವಾಸ ಆರ್ಮುಡ್ತಾಯ ಅವರ ಪೌರೋಹಿತ್ಯದಲ್ಲಿ ಪೂಜೆ ನೆರವೇರಿತು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿ, ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ದೂರದರ್ಶಿತ್ವದಿಂದ ಲಕ್ಷಾಂತರ ಕುಟುಂಬಗಳ ಅಭಿವೃದ್ದಿಯಾಗಿದೆ. ಸ್ವ ಸಹಾಯ ಗುಂಪುಗಳಿಂದ ಸಮಾಜದಲ್ಲಿ ಒಗ್ಗಟ್ಟು ಉಂಟಾಗಿದೆ ಎಂದರು.

ಪುರೋಹಿತ ನರಿಕೊಂಬು ಕೇಶವ ಶಾಂತಿ ಅವರು ಧಾರ್ಮಿಕ ಉಪನ್ಯಾಸ ನೀಡಿ, ನಮ್ಮ ಧರ್ಮ, ಸಂಸ್ಕೃತಿಯನ್ನು ಉಳಿಸಿ,ಬೆಳೆಸುವ ಕಾರ್ಯವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳಿ ಗ್ರಾ.ಪಂ. ಅಧ್ಯಕ್ಷ ಸುರೇಶ್ ಮೈರ

ವಹಿಸಿದ್ದರು.ತಾಲೂಕು ಯೋಜನಾದಿಕಾರಿ ಜಯಾನಂದ ಪಿ., ಒಕ್ಕೂಟ ವಗ್ಗ ವಲಯಾಧ್ಯಕ್ಷ ಚಿದಾನಂದ ರೈ ಕಕ್ಯ, ಕಕ್ಯಪದವು ಗರಡಿ ಉತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಕಕ್ಯಬೀಡು ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಸತ್ಯಶಂಕರ ಶೆಟ್ಟಿ, ಒಕ್ಕೂಟದ ಅಧ್ಯಕ್ಷರಾದ ವಿಶ್ವನಾಥ ಉಳಿ,ಶಿವಾನಂದ ಕಜೆಕೋಡಿ, ಸುನಂದ ಬರಮೇಲು, ವಲಯ ಮೇಲ್ವಿಚಾರಕಿ ಅಶ್ವಿನಿ ಉಪಸ್ಥಿತರಿದ್ದರು.

ದಾಖಲೆ ಪುಸ್ತಕ ಹಸ್ತಾಂತರಿಸುವ ಮೂಲಕ ನೂತನ ಸಮಿತಿಗೆ ಜವಾಬ್ದಾರಿ ನೀಡಲಾಯಿತು.  

ಅಶ್ವಿನಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಶೇಖರ ಕಂಚಲಪಲ್ಕೆ ವಂದಿಸಿದರು. ದೇವದಾಸ ಅಬುರ ಕಾರ್ಯಕ್ರಮ ನಿರೂಪಿಸಿದರು.

 

Leave a Comment