ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಬದನಡಿ ಶ್ರೀ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಅಶ್ವತ್ಥ ಮರಕ್ಕೆ ವಿವಾಹ ಕಾರ್ಯಕ್ರಮ ಗುರುವಾರ ನಡೆಯಿತು. ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ದೇವರಿಗೆ ಕಲಶಾಭಿಷೇಕ ಮತ್ತು ವಿಶೇಷ ರಂಗಪೂಜೆ ನಡೆಯಿತು. ಇದೇ ವೇಳೆ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ ಮತ್ತು ಯಕ್ಷಗಾನ ಬಯಲಾಟ ನಡೆಯಿತು.
ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ದುಗಾದಾಸ್ ಶೆಟ್ಟಿ ಕರೆಂಕಿಜೆ, ಗ್ರಾಮ
ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಪ್ರಧಾನ ಅರ್ಚಕ ಕೆ.ಸುಂದರ ಹೊಳ್ಳ, ನಾಗೇಶ ಭಟ್ ಮತ್ತಿತರರು ಇದ್ದರು.














