ಬಂಟ್ವಾಳ :ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿನ ಆಳುಪ ಸಮಾಜ ವಿಜ್ಞಾನ ಸಂಘದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿನಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ವೆಂಕಪ್ಪ ಪೂಜಾರಿ ಕರ್ಬೆಟ್ಟು ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸೇನೆ ಹಾಗು ಸೈನಿಕ ಕಾರ್ಯಾಚರಣೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಶಿಕ್ಷಕರಾದ ಕಮಲಾಕ್ಷ ಕಲ್ಲಡ್ಕ
ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಸಿಬ್ಬಂದಿ, ನಿವೃತ್ತ ಯೋಧ ಹರೀಶ್ ದೇವಂದ ಬೆಟ್ಟು ಪ್ರಾಸ್ತಾವಿಕ ವಾಗಿ ಮಾತನಾಡಿ ಸರ್ವರನ್ನು ಸ್ವಾಗತಿಸಿದರು.ಆಳುಪ ಸಮಾಜ ವಿಜ್ಞಾನ ಸಂಘದ ಅಧ್ಯಕ್ಷ ರಚನ್ ವಂದಿಸಿದರು.ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.














