ಕಡೇಶಿವಾಲಯ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

Coastal Bulletin
ಕಡೇಶಿವಾಲಯ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಬಂಟ್ವಾಳ :ಕೆಲಸಕ್ಕೆ ತೆರಳಿ ಬಳಿಕ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಕೊರತಿಗುರಿ ನಿವಾಸಿ ನಿವಾಸಿ ಹೇಮಂತ್ ಆಚಾರ್ಯ ಎಂಬಾತನ ಮೃತದೇಹ ಕಂಕನಾಡಿ ಪೋಲೀಸ್ ಠಾಣಾ ವ್ಯಾಪ್ತಿಯ ಬಜಾಲ್ ಮುಗೇರು ಎಂಬಲ್ಲಿ ನೇತ್ರಾವತಿ ‌ನದಿ ಮಧ್ಯ ಭಾಗದಲ್ಲಿ ತೇಲಾಡುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇಂದು ಮಧ್ಯಾಹ್ನದ ಬಳಿಕ ತುಂಬೆ ಡ್ಯಾಂ ನಿಂದ ಕೆಳಭಾಗದಲ್ಲಿ ಮೂರು ತಂಡಗಳ ಜೊತೆಯಲ್ಲಿ ಡ್ರೋನ್ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು. ಸಂಜೆ ವೇಳೆ ಡ್ರೋನ್ ನ ಕಣ್ಣಿಗೆ ಶವವೊಂದು‌ ತೇಲಾಡುವ ಕಂಡಿದ್ದು, ನದಿಯಲ್ಲಿ ಶೋಧ ಕಾರ್ಯದಲ್ಲಿ ತೊಡಗಿದ್ದ ತಂಡ ಈತನ ಮೃತದೇಹವನ್ನು ನದಿಯಿಂದ ಮೇಲಕ್ಕೆತ್ತಿದೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್

ತಂಡ ಹಾಗೂ ನಗರ ಪೋಲೀಸ್ ಠಾಣೆಯ ಸಿಬ್ಬಂದಿಗಳು, ಅಗ್ನಿಶಾಮಕ ದಳದ ಸಿಬಂದಿಗಳು, ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು ಬಳಿಕ ಇಂದು ಈತನ ಪತ್ತೆಗಾಗಿ ಈಶ್ವರ ಮಲ್ಪೆ ಅವರ ತಂಡ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ(ಎನ್.ಡಿ.ಆರ್.ಎಫ್) ಬಂಟ್ವಾಳಕ್ಕೆ ಆಗಮಿಸಿ ನೇತ್ರಾವತಿ ನದಿ ತೀರದಲ್ಲಿ ಶೋಧ ಕಾರ್ಯ ನಡೆಸಿತ್ತು.

Leave a Comment