ಮಧ್ವ: ಹೃದಯಾಘಾತದಿಂದ ಯುವತಿ ಸಾವು.

Coastal Bulletin
ಮಧ್ವ: ಹೃದಯಾಘಾತದಿಂದ ಯುವತಿ ಸಾವು.

ಬಂಟ್ವಾಳ: ಇಲ್ಲಿನ ಕಾವಳಪಡೂರು ಗ್ರಾಮದ ಮಧ್ವಗುತ್ತು ಎಂಬಲ್ಲಿ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಇಲ್ಲಿನ ನಿವಾಸಿ ರಾಜೀವ ಶೆಟ್ಟಿ-ಮೀನಾ ದಂಪತಿ ಪುತ್ರಿ ಮಿತ್ರಾ ಶೆಟ್ಟಿ (19) ಮೃತ ದುರ್ದೈವಿ. ಈಕೆ ತನ್ನ ದೊಡ್ಡಮ್ಮನ ಮನೆಯಲ್ಲಿ ತಾಯಿ ಜೊತೆಗೆ ಮಂಗಳವಾರ ರಾತ್ರಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಅವರನ್ನು ಎಬ್ಬಿಸುವಾಗ

ಸಾವನ್ನಪ್ಪಿರುವುದು ತಿಳಿದು ಬಂದಿದೆ. ಬಿ.ಸಿ.ರೋಡ್ ನಲ್ಲಿ ಖಾಸಗಿ ಕಚೇರಿಯಲ್ಲಿ ಉದ್ಯೋಗದಲ್ಲಿದ್ದ ಈಕೆಗೆ ತಂದೆ, ತಾಯಿ, ಸಹೋದರ ಇದ್ದಾರೆ. ವಿವಿಧ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

Leave a Comment