ಕುಲಶೇಖರ :ಕುಲಾಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್–1ರ ಆಹ್ವಾನ ಪತ್ರಿಕೆ ಬಿಡುಗಡೆ. ಡಿ.13ರಂದು ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

Coastal Bulletin
ಕುಲಶೇಖರ :ಕುಲಾಲ್ ಬ್ಯಾಡ್ಮಿಂಟನ್ ಲೀಗ್ ಸೀಸನ್–1ರ ಆಹ್ವಾನ ಪತ್ರಿಕೆ ಬಿಡುಗಡೆ. ಡಿ.13ರಂದು ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

ಮಂಗಳೂರು: ಯುವ ಮೂಲ್ಯರ್ (Yuva Moolyer) ಪ್ರಸ್ತುತಪಡಿಸುವ ಕುಲಾಲ್ ಬ್ಯಾಡ್ಮಿಂಟನ್ ಲೀಗ್ (KBL) ಸೀಸನ್–1ರ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭವು ಅಕ್ಟೋಬರ್ 31ರಂದು ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ನಡೆಯಿತು.

ಈ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕ್ರೀಡಾಕೂಟ ಯಶಸ್ವಿಯಾಗಿ ನಡೆಯುವಂತೆ ಪ್ರಾರ್ಥಿಸಲಾಯಿತು. ಬಳಿಕ ದೇವಸ್ಥಾನದ ವಠಾರದಲ್ಲಿ ಗಣ್ಯರು ಹಾಗೂ ಆಯೋಜಕರ ಉಪಸ್ಥಿತಿಯಲ್ಲಿ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.


ಕುಲಾಲ ಸಮುದಾಯದ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು, ಯುವಜನರಲ್ಲಿ ಕ್ರೀಡಾಸಕ್ತಿಯನ್ನು ಉತ್ತೇಜಿಸುವುದು ಹಾಗೂ ಸಮುದಾಯದ ಸದಸ್ಯರ ನಡುವೆ ಒಗ್ಗಟ್ಟು ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಆಶಯದೊಂದಿಗೆ ಈ

ಲೀಗ್ ಆಯೋಜಿಸಲಾಗಿದೆ.


ಡಿ.13, 2026ರಂದು ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸಲು ಆಸಕ್ತರು ನೋಂದಣಿ ಮಾಡಿಕೊಳ್ಳುವಂತೆ ಸಂಘಟಕರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಿದ್ಧಾರ್ಥ್ ಮೂಲ್ಯ (89517 95968) ಹಾಗೂ ಕಿರಣ್ ಅಟ್ಲೂರು (82775 58458) ಅವರನ್ನು ಸಂಪರ್ಕಿಸಬಹುದು.

ಕುಲಾಲ್ ಸಮುದಾಯದ ಕ್ರೀಡಾಭಿಮಾನಿಗಳು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment