Coastal Bulletin

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಇಂದು(ಜುಲೈ 04) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಉಳ್ಳಾಲ, ಮುಲ್ಕಿ, ಬಂಟ್ವಾಳ ಹಾಗೂ ಮೂಡಬಿದಿರೆ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕಿನಲ್ಲಿ ಮಾತ್ರ ಸದ್ಯಕ್ಕೆ ರಜೆ ನೀಡಲಾಗಿದ್ದು, ಉಳಿದ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರವನ್ನು ತಹಶೀಲ್ದಾರ್ ಗಳಿಗೆ ನೀಡಲಾಗಿದೆ.

ಹವಾಮಾನ ಇಲಾಖೆಯು ದ‌‌ಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಹವಮಾನ ಇಲಾಖೆಯ ವರದಿ ಆಧರಿಸಿ ಯಾವ-ಯಾವ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆಯೋ ಆ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜಿಲ್ಲೆಯ ಐದು ತಾಲೂಕುಗಳಲ್ಲಿನ ರಜೆ ಘೋಷಣೆ ಮಾಡಿದ್ದಾರೆ. ಇನ್ನು ಮಳೆ ಪರಿಸ್ಥಿತಿ

ನೋಡಿಕೊಂಡು ಆಯಾ ತಾಲೂಕು ತಹಶೀಲ್ದಾರ್​ಗಳು ರಜೆ ಘೋಷಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ನೀಡಿದ್ದಾರೆ.

ಜುಲೈ 3 ರಿಂದ ಜುಲೈ 7 ರವರೆಗೆ ಕರ್ನಾಟಕ ಕರಾವಳಿಯಲ್ಲಿ 40-45 ಕಿಲೋಮೀಟರ್ ಮತ್ತು 55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಒಂದು ರೀತಿಯಲ್ಲಿ ಚಂಡಮಾರುತದ ವಾತಾವರಣವಿದೆ ಎಂದು ಅದು ಹೇಳಿದೆ.

Leave a Comment