ಬಂಟ್ವಾಳ :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ - 2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮ ಪಂಚಾಯತ್ ನಲ್ಲಿ ನೀರಿನ ಗುಣಮಟ್ಟ ಪರೀಕ್ಷಾ ತರಭೇತಿಯನ್ನು ಜ.4 ಬುಧವಾರರಂದು ಆಯೊಜಿಸಲಾಗಿತ್ತು.
ಈ ತರಬೇತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಕರ್ಕೇರ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಿವಲಾಲ್ ಚವ್ಹಾಣ್,ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ,ನೀರು ಘಂಟಿ ಗಳು
ಹಾಗು ಪಂಚಾಯತ್ ಸಿಬ್ಬಂದಿಗಳು ಸೇರಿ ಒಟ್ಟು 22 ಜನ ಭಾಗವಹಿಸಿದ್ದರು.
ತರಬೇತಿಯನ್ನು ಗ್ರಾಮ್ಸ್ ರಾಯಚೂರು ಸಂಸ್ಥೆಯ ಜಲ ಜೀವನ್ ಮಿಷನ್ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕರಾದ ಗುಣವತಿಯವರು ಆಯೋಜಿಸಿ ಯಶಸ್ವಿಗೊಳಿಸಿದರು.















