ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದು, ಇವರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಈಡಿಗ,ಬಿಲ್ಲವ,ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಶೈಕ್ಷಣಿಕ,ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ಸದರಿ ಸಮುದಾಯದವರ ಬಹುಮುಖ್ಯ ಬೇಡಿಕೆಯಾದ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ಯನ್ನು ಜ. 05, 2023 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಘೋಷಣೆ ಮಾಡಿ ಮುಂದಿನ ಆಯವ್ಯದಲ್ಲಿ ಸೂಕ್ತ ಅನುದಾನವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಹಿಂದೆ “ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ” ಸ್ಥಾಪಿಸಲಾಗಿದ್ದು,ಅದನ್ನು ಪರಿವರ್ತಿಸಿ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ರಚಿಸುವುದಾಗಿ ಘೋಷಿಸಲಾಗಿದೆ.ಬಿಲ್ಲವ ಹಾಗೂ
ಈಡಿಗ ಸಮಾಜದ ಬಹುಮುಖ್ಯ ಬೇಡಿಕೆಯನ್ನು ಈಡೇರಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್,ಶಾಸಕರುಗಳು ಹಾಗೂ ಬಿಲ್ಲವ ಸಮಾಜದ ಸ್ವಾಮೀಜಿಗಳು ಹಾಗೂ ಮುಖಂಡರುಗಳ ನಿಯೋಗದೊಂದಿಗೆ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಮನವರಿಕೆ ಮಾಡಿದಾಗ “ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿ” ಯನ್ನು ಘೋಷಣೆ ಮಾಡಿದ್ದಾರೆ.














