Coastal Bulletin

ಪುಂಜಾಲಕಟ್ಟೆ: ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರನ್ನು ಜಾಗದ ತಕರಾರಿನಲ್ಲಿ ಪೋಲಿಸರು ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದ ಆರೋಪವು ಕೇಳಿ‌ ಬಂದಿದ್ದು, ಈ ಘಟನೆಯನ್ನು ಜಿಲ್ಲಾ ವಕೀಲರ ಸಂಘ ತೀವ್ರವಾಗಿ ಖಂಡಿಸಿ, ಪೊಲೀಸ್ ಅಧಿಕಾರಿಯ ಅಮಾನತಿನ ಆಗ್ರಹದೊಂದಿಗೆ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.

ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿ ‌ಎಂಬವರ ಜಾಗದ ವಿಚಾರದಲ್ಲಿ ತಕರಾರು ನಡೆದು, ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು ಎನ್ನಲಾಗಿತ್ತು. ಪುಂಜಾಲಕಟ್ಟೆ ಠಾಣಾಧಿಕಾರಿ ರಾತ್ರೋ ರಾತ್ರಿ ಅವರ ಮನೆಗೆ ನುಗ್ಗಿ  ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸದ್ಯಕ್ಕೆ

ಕುಲದೀಪ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಕೀಲರ ಸಂಘವು ಈ ಘಟನೆಯನ್ನು ಖಂಡಿಸಿ, ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿ ಕಾನೂನು ಕ್ರಮ ಜರಗಿಸಬೇಕು ಎಂದು ಅಗ್ರಹಿಸಿ, ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

Leave a Comment