Coastal Bulletin

ತುಂಬೆ : ಕ್ರೀಡೆ ಎನ್ನುವುದು ಜಾತಿ ಮತ ಭಾಷೆಯ ಎಲ್ಲೆಗಳನ್ನು ಮೀರಿ ಇರುವಂತಹದು. ಇಂತಹ ಕ್ರೀಡಾ ಚಟುವಟಿಕೆಗಳು ಬದುಕಿನ ಅವಿಭಾಜ್ಯ ಅಂಗವಾದಾಗ ದೈಹಿಕ ಆರೋಗ್ಯವನ್ನೂ, ಸದೃಡ ಮನವನ್ನೂ ಪಡೆದುಕೊಂಡು ನಮ್ಮ ದೇಶದ ಸೇವೆಗಾಗಿ ಮುಡಿಪಾಗಿ ಇಡಲು ಸಾಧ್ಯವಾಗುತ್ತದೆ. ಕ್ರೀಡೆಗಳಲ್ಲಿ ಅದರ ಸವಿನೆನಪುಗಳಿಗಾಗಿ ವಿದ್ಯಾರ್ಥಿಗಳು ಭಾಗವಹಿಸುವುದು ಮುಖ್ಯವಾಗಿದ್ದು. ಕೇವಲ ಟ್ರೋಪಿಗಾಗಿ ಅಲ್ಲ ಎನ್ನುವುದನ್ನು ತಿಳಿದುಕೊಂಡಿರಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗೀಯ ಅಧಿಕಾರಿ ಜಯಕರ ಶೆಟ್ಟಿ ಹೇಳಿದರು.

ಅವರು ತುಂಬೆ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ ಕ್ರೀಡಾಕೂಟದ ಧ್ವಜಾರೋಹಣ ಮಾಡಿ, ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿದರು.

ಉದ್ಘಾಟನಾ ಸಮಾರಂಭ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಹಿಯುದ್ದೀನ್ ಶಿಕ್ಷಣ ಸಂಸ್ಥೆಗಳ‌ ಅಧ್ಯಕ್ಷ ಬಿ.ಅಬ್ದುಲ್ ಸಲಾಂ ಮಾತನಾಡಿ, ವಿದ್ಯಾರ್ಥಿಗಳು ಕ್ರಮಬದ್ದವಾಗಿ ಮತ್ತು ಶಿಸ್ತುಬದ್ಧವಾಗಿ ನಡೆಸುತ್ತಿರುವ ಕ್ರೀಡಾಕೂಟದ ಬಗ್ಗೆ ಪ್ರಶಂಶಿಸಿ ಮಾತನಾಡಿದರು.

ಇದೇ ವೇಳೆಗೆ ಬಿ.ಎ. ಬ್ಯಾಂಡ್ ಸೆಟ್ ಗೆ ತರಬೇತುದಾರರಾದ ದೈಹಿಕ ಶಿಕ್ಷಣ ‌ಶಿಕ್ಷಕ ಪ್ರಭಾಕರ ಜೋಗಿ ಅವರಿಗೆ ಗೌರವಾರ್ಪಣೆ ನೀಡಲಾಯಿತು. ವಿದ್ಯಾರ್ಥಿ ಆಸಿಫ್ ಪ್ರತಿಜ್ಞಾ ವಿಧಿ ಬೋಧಿಸಿದರು

ರಕ್ಷಕ- ಶಿಕ್ಷಕಾ

ಸಂಘದ ಅಧ್ಯಕ್ಷ ಬಶೀರ್ ತಂಡೇಲ್, ಉಪಾಧ್ಯಕ್ಷ ನಿಸಾರ್ ಅಹಮ್ಮದ್, ನಿಟ್ಟೆ ಶಿಕ್ಷಣ ಸಂಸ್ಥೆಯ ಕನ್ಸಲ್ಪೆಂಟ್ ಇಂಜಿನಿಯರ್ ಅರ್ಜುನ್ ಪೂಂಜಾ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಮೊದಲಿಗೆ ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಪ್ರಾಶುಂಪಾಲ ಕೆ.ಎನ್.ಗಂಗಾಧರ ಆಳ್ವ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕ ಜಗದೀಶ್ ರೈ ಬಿ.ಕವಾಯತು ನಿರ್ದೇಶಿಸಿ ವಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಸಾಯಿರಾಂ ನಾಯಕ್.ಕೆ ಮತ್ತು ದೈಹಿಕ ಶಿಕ್ಷಣ ಶಿಕ್ಷಕಿ ಮೋಲಿ ಎಡ್ನಾ ಗೊನ್ಸಾಲ್ವ್ ಸ್ ಸಹಕರಿಸಿದರು. ಕಾಲೇಜಿನ ಉಪನ್ಯಾಸಕ ದಿನೇಶ್ ಶೆಟ್ಟಿ ಅಳಿಕೆ ನಿರೂಪಿಸಿದರು.

Leave a Comment