ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ನಾಳೆಯೂ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಸಲಾಗಿದೆ ಎಂದು ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















