ಬಂಟ್ವಾಳ: ಡಿ. ೧೮ರಂದು ಬಂಟ್ವಾಳದ ರಥಬೀದಿಯಲ್ಲಿರುವ ರಾಜಾಸೌಧದ ಸ್ವರ್ಣಸಭಾದಲ್ಲಿ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಮೆಲ್ಕಾರ್ ಇದರ ಪ್ರಥಮ ವಾರ್ಷಿಕೋತ್ಸವ ನಡೆಯಲಿದ್ದು ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳದ ಸ್ವಣೋದ್ಯಮಿ ನಾಗೇಂದ್ರ ವಿ. ಬಾಳಿಗ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಪ್ರತಿಷ್ಠಾನದ ಅಧ್ಯಕ್ಷ ಕೈಯ್ಯೂರು ನಾರಾಯಣ ಭಟ್ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗೌರವಾಧ್ಯಕ್ಷ ಪ್ರೊ. ಎ.ವಿ. ನಾರಾಯಣ, ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ,
ಕಾರ್ಯಕಾರಿ ಸಮಿತಿ ಸದಸ್ಯರಾದ ಜಯಾನಂದ ಪೆರಾಜೆ, ಅನಾರು ಕೃಷ್ಣ ಶರ್ಮ, ಪ್ರೊ. ವೇದವ್ಯಾಸ ರಾಮಕುಂಜ, ಉಮೇಶ್ ಶೆಣೈ ಉಪ್ಪಿನಂಗಡಿ, ಕಾಂತಾಡಿ ಸೀತಾರಾಮ ಶೆಟ್ಟಿ, ರಾಜಮಣಿ ರಾಮಕುಂಜ ಉಪಸ್ಥಿತರಿದ್ದರು.















