ಬಂಟ್ವಾಳ: ಸಜೀಪಮೂಡ ಗ್ರಾಮದ ಕಾರಣಿಕ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜ.09ರಿಂದ ಜ.16ರವರೆಗೆ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಸಜೀಪ ಮಾಗಣೆ ಶ್ರೀ ಉಳ್ಳಾಲ್ತಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತವಾಗಿ ತಾ. 09-01-2023ರಿಂದ ತಾ. 16-01-2023 ರವರೆಗೆ ಶ್ರೀ ಕ್ಷೇತ್ರ
ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ಮತ್ತು ಕೋಲ ಸೇವೆ ಇರುವುದಿಲ್ಲ. ಆದ್ರೆ ತಾ.17 ರಿಂದ ಎಂದಿನಂತೆ ಅಗೇಲು ಸೇವೆ ಇರುತ್ತದೆ ತಿಳಿಸಿದೆ.














