ಬಂಟ್ವಾಳ :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ -2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಗ್ರಾಮ ಪಂಚಾಯತ್ ನಲ್ಲಿ ಮಳೆ ನೀರು ಕೊಯ್ಲು ಮತ್ತು ಬೂದು ನೀರು ನಿರ್ವಹಣೆ ಬಗ್ಗೆ ಪ್ರೇರೇಪಣಾ ಕಾರ್ಯಗಾರವನ್ನು ಜ.7ರಂದು ಆಯೋಜಿಸಲಾಗಿತ್ತು.
ಈ ತರಬೇತಿಯಲ್ಲಿ ಗ್ರಾಮ ಅಧ್ಯಕ್ಷರಾದ ಪ್ರಕಾಶ್ ಆಳ್ವ,ಉಪಾಧ್ಯಕ್ಷೆ ಮಮತಾ ಪೂಜಾರಿ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ, ಪಂಚಾಯತ್ ಸದಸ್ಯರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮಸ್ಥರು ಸೇರಿ ಒಟ್ಟು 45 ಮಂದಿ ಭಾಗವಹಿಸಿದ್ದರು.
ಜಲ ಜೀವನ್ ಮಿಷನ್ ನ ಅನುಷ್ಠಾನ ಬೆಂಬಲ
ಸಂಸ್ಥೆಯ ಸಿಬ್ಬಂದಿ ಗುಣವತಿಯವರು ಮಳೆ ನೀರು ಕೊಯ್ಲು ಘಟಕ ಮತ್ತು ಬೂದುನೀರು ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು. ಬಂಟ್ವಾಳ ತಾಲೂಕಿನ MGNREGA ಯ ಐಇಸಿ ಸಿಬ್ಬಂದಿ ರಾಜೇಶ್ ರವರು ಜಲಮರುಪೂರಣ ಘಟಕ ಮತ್ತು ದ್ರವತ್ಯಾಜ್ಯ ಘಟಕ ವೆಚ್ಚದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.














