Coastal Bulletin

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮತ್ತೆ ಹಿಜಾಬ್ ವಿವಾದ ಜಾಸ್ತಿ ಆಗುತ್ತಲೇ ಇದೆ. ಇವತ್ತು ಹಿಜಾಬ್ ಗೆ ಪಟ್ಟು ಹಿಡಿದಿದ್ದ 24 ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ನಿರ್ಬಂಧ ವಿಧಿಸಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಹಿಜಾಬ್ ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಹಲವು ಬಾರಿ ಸೂಚನೆ ನೀಡಿದರೂ 24 ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ

ಉಪ್ಪಿನಂಗಡಿ ಕಾಲೇಜಿನಲ್ಲಿ 24 ವಿದ್ಯಾರ್ಥಿನಿಯರಿಗೆ 1 ವಾರ ಕಾಲ ತರಗತಿಗೆ ನಿರ್ಬಂಧ ವಿಧಿಸಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಕಾಲೇಜು ಉಪನ್ಯಾಸಕರ ಹಾಗೂ ಆಡಳಿತ ಮಂಡಳಿ ನಡೆಸಿದ ಸಭೆಯಲ್ಲಿ ವಿದ್ಯಾರ್ಥಿನಿಯರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸಲು ನಿರ್ಧರಿಸಿ, ಈ ಕ್ರಮ ಕೈಗೊಳ್ಳಲಾಗಿದೆ.

Leave a Comment