Coastal Bulletin

ದಕ್ಷಿಣ ಕನ್ನಡ : ಕಳೆದೆರಡುದಿನಗಳಿಂದ ಜೋರು ಮಳೆಯಾಗುತ್ತಿರುವ ಕಾರಣ ಶಾಲಾ- ಕಾಲೇಜುಗಳಿಗೆ ಜು.9ರವರೆಗೆ ರಜೆ ಘೋಷಣೆ ಮಾಡಿದ್ದಾರೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ತೀವ್ರ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ

ಕಾಲೇಜುಗಳಿಗೆ ರಜೆ ಘೋಷಸಲಾಗಿದೆ ಎಂದು ಡಾ.ಕೆ.ವಿ.ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕರಾವಳಿಯಾದ್ಯಂತ ವರುಣನ ಆರ್ಭಟ ದಿನೇ ದಿನೇ ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್  ಘೋಷಿಸಲಾಗಿದೆ.

Leave a Comment