ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರ, ಕೈಗಾರಿಕಾ ತರಬೇತಿ ಕೇಂದ್ರ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಡಿ.17 ರಂದು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಅವರು ತಿಳಿಸಿದರು.
ಜೀವನದಲ್ಲಿ ಭದ್ರತೆ ಸಿಗಬೇಕು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಪ್ರಯೋಜನ ಪಡೆಯಲು ಅವರು ತಿಳಿಸಿದರು.
ಭವಿಷ್ಯಿ ಉದ್ಯೋಗ ಮಾಹಿತಿ ಕೇಂದ್ರ ಕಲ್ಲಡ್ಕ ವಿದ್ಯಾಕೇಂದ್ರದಲ್ಲಿ ಕಾರ್ಯಚರಿಸುತ್ತಿದ್ದು, ಶಿಕ್ಷಕ ಉದ್ಯೋಗಾರ್ಥಿಗಳಿಗೆ ಪಿ.ಯುಸಿ ಬಳಿಕ ತರಬೇತಿ ನೀಡುವ ಕಾರ್ಯ ನಡೆಯುತ್ತಿದೆ.
50 ಕ್ಕೂ ಹೆಚ್ಚು ಖಾಸಗಿ ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಯಿದ್ದು, ಈಗಾಗಲೇ 30 ಕ್ಕೂ ಹೆಚ್ಚಿನ ಖಾಸಗಿ ಕಂಪೆನಿಗಳು ನೊಂದಾಯಿಸಿವೆ. ಗ್ರಾಮೀಣ ವಿದ್ಯಾರ್ಥಿ ಗಳನ್ನು ಗಮನದಲ್ಲಿಟ್ಟುಕೊಂಡು ಪ್ರತೀ ಮೂರು ವರ್ಷಗಳಿಗೊಮ್ಮೆ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಈ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳು ಫಾರ್ಮಸಿಸ್ಟ್, ಫಾರ್ಮಸಿ ಅಸಿಸ್ಟಂಟ್, ನರ್ಸ್, ಹೌಸ್‌ಮೇಟ್, ಅಕೌಂಟ್ಸ್ ಎಕ್ಸಿಕ್ಯೂಟಿವ್, ಹೆಚ್.ಆರ್ ಎಕ್ಸಿಕ್ಯೂಟಿವ್, ಡಿಜಿಟಲ್ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಟೆಅಕಾಲಿಂಗ್, ಟೆಲಮಾರ್ಕೆಟಿಂಗ್, ಕೈಂಟ್ ಮ್ಯಾನೇಜ್‌ಮೆಂಟ್,
ಸೇಲ್ಸ್ ಕನ್ಸಲ್ಟಂಟ್, ಕಸ್ಟಮರ್ ಕೇರ್ ಸಪೋರ್ಟ್, ಸೆಮಿಸ್ಕಿಲ್ ಆಪರೇಟರ್, ಟೆಕ್ನಿಶಿಯನ್, ಸರ್ವಿಸ್ ಸೇಲ್ಸ್ ಎಕ್ಸಿಕ್ಯೂಟಿವ್, ಸೇಲ್ಸ್ ಮ್ಯಾನೇಜರ್, ಸರ್ವೀಸ್ ಮ್ಯಾನೇಜರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಬಿಲ್ಡಿಂಗ್, ಸ್ಟೋರ್ ಇನ್‌ಚಾರ್ಜ್, ಕಸ್ಟಮರ್ ರಿಲೇಶನ್ ಮ್ಯಾನೇಜರ್, ವರ್ಚುವಲ್ ರಿಲೇಶನ್‌ಶಿಪ್ ಮ್ಯಾನೇಜರ್, ಟೆಕ್ನಿಕಲ್ ಸಪೋರ್ಟ್ ಇಂಜಿನಿಯರ್. ವಾರ್ಡನ್ ಹಾಗೂ ಮುಂತಾದ ಅನೇಕ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ, ಪಿಯು.ಸಿ. ಐ.ಟಿ.ಐ, ಡಿಪ್ಲೋಮಾ, ತಾಂತ್ರಿಕ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅನುಭವಿ ಹಾಗೂ ಅನುಭವರಹಿತ ಉದ್ಯೋಗಾಕಾಂಕ್ಷಿಗಳಿಗೆ ಸಂದರ್ಶನದ ಮೂಲಕ ನೇಮಕಾತಿ ನಡೆಸಲಿದ್ದಾರೆ ಎಂದು ಅವರು ತಿಳಿಸಿದರು.
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾದವ ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ , ಉದ್ಯೋಗ ವಿನಿಮಯ ಕೇಂದ್ರದ ಅಧಿಕಾರಿ ದಯಾನಂದ ಪೆರಾಜೆ ಉಪಸ್ಥಿತರಿದ್ದರು.















