ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಘಟನೆ ಇಂದು ಸಂಜೆ ಬಿಸಿರೋಡಿನಲ್ಲಿ ವರದಿಯಾಗಿದೆ.
ಸಂಜೆ 5 ಗಟೆಯ ವೇಳೆಗೆ 52 ವರ್ಷದ ಮಹಿಳೆ ರಸ್ತೆ ದಾಟಲು ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಬದಿಯಲ್ಲಿ ನಿಂತಿದ್ದಾಗ, ಮಂಗಳೂರಿನಿಂದ ಬಂದ ಬೈಕ್
ಸವಾರ ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ.
ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು ತಕ್ಷಣವೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ಮಹಿಳೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.














